ಅಂಗನವಾಡಿಗಳ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ: ಕೆ.ವಿ. ಪ್ರಭಾಕರ್

Upayuktha
0


ಮಂಗಳೂರು: ಎಳೆಯ ಮಕ್ಕಳಿಗೆ ಶಿಕ್ಷಣ ನೀಡುವ ಅಂಗನವಾಡಿಗಳ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದರು.


ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದ ಅವರು ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಸಿಬ್ಬಂದಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸಿರುವುದು ಶ್ಲಾಘನೀಯ ಎಂದರು.


ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಸ್ವಂತ ವೆಚ್ಚದಲ್ಲಿ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಶುದ್ದ ನೀರಿನ ಘಟಕ, ಫ್ಯಾನ್, ಸಮವಸ್ತ್ರ ನೀಡಲಾಗಿದ್ದು, ಬೇಡಿಕೆಗೆ ಅನುಗುಣವಾಗಿ ಇನ್ನಷ್ಟು ಸೌಲಭ್ಯ ನೀಡುವುದಾಗಿ ಕೆ.ವಿ. ಪ್ರಭಾಕರ್ ಈ ಸಂದರ್ಭ ತಿಳಿಸಿದರು.


ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್. ಬಿ.ಎನ್., ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ,  ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಸಿಂಧು, ಕೇಂದ್ರದ ಶಿಕ್ಷಕಿ ನಂದಾ, ಸಹಾಯಕಿ ಲಕ್ಷ್ಮಿ, ಆಶಾ ಕಾರ್ಯಕರ್ತೆ ಪ್ರಭಾ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top