ಮಂಗಳೂರು ವಿವಿ ಮಟ್ಟದ ಖೋ ಖೋ ಪಂದ್ಯಾಟ: ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ

Upayuktha
0



ಪುತ್ತೂರು: ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪ್ರಸ್ತುತ ವರ್ಷದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋ ಖೋ ಪಂದ್ಯಾಟದಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿನ ಬಾಲಕರ ತಂಡವು ದ್ವಿತೀಯ ಹಾಗೂ ಬಾಲಕಿಯರ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. 


ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಬಿಎ ವಿದ್ಯಾರ್ಥಿನಿ ದಿವ್ಯಾ ಆಲ್ ರೌಂಡರ್ ಪ್ರಶಸ್ತಿಯನ್ನು ಹಾಗೂ ಬಾಲಕರ ವಿಭಾಗದಲ್ಲಿ ಪ್ರಥಮ ಬಿಎಸ್ ಸ್ಸಿ ವಿದ್ಯಾರ್ಥಿ ಸುಹಾಸ್ ಬೆಸ್ಟ್ ಅಟ್ಯಾಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ.ಜ್ಯೋತಿಕುಮಾರಿ ಪಿ.ಸಿ ಹಾಗೂ ಯತೀಶ್ ಬಾರ್ತಿಕುಮೇರು ಹಾಗೂ ಕಾರ್ತಿಕ್ ತರಬೇತಿಯನ್ನು ನೀಡಿರುತ್ತಾರೆ.


ಸಾಧನೆಗೈದ ಕ್ರೀಡಾಪಟುಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕವೃಂದದವರು ವಿಶೇಷವಾಗಿ ಅಭಿನಂದಿಸಿದ್ದಾರೆ.



Post a Comment

0 Comments
Post a Comment (0)
To Top