ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ 'ಫಿಲೋ ಮಿಲನ - 2025' ಕಾರ್ಯಕ್ರಮವು ಮಾರ್ಚ್ 8 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ಮಾತನಾಡಿ, ಈ ಸಂಸ್ಥೆಯಲ್ಲಿ ಕಲಿತಿರುವ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಂಡಿದ್ದು, ನಮ್ಮ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಪ್ರಭಾವ ಸಮಾಜದ ಮೇಲೆ ಪ್ರಬಲವಾಗಿದೆ.
ಹಳೆ ವಿದ್ಯಾರ್ಥಿಗಳಿಗೆ ಕಾಲೇಜಿನ ಬಗೆಗೆ ಅತ್ಯಂತ ಪ್ರೀತಿಯಿದ್ದು, ಪ್ರತಿ ಸಲ ಕಾಲೇಜಿಗೆ ಬರುವಾಗ ಎಲ್ಲಾ ಉಪನ್ಯಾಸಕರನ್ನು ಬೇಟಿಯಾಗುವುದನ್ನು ಮರೆಯುವುದಿಲ್ಲ. ಸಂತ ಫಿಲೋಮಿನಾ ಪ ಪೂ ಕಾಲೇಜಿನ ಹಳೆ ವಿದ್ಯಾರ್ಥಿಗಳು ಪ್ರಪಂಚದ ಯಾವುದೇ ಬಾಗದಲ್ಲಿದ್ದರೂ ಒಂದೇ ಕುಟುಂಬದ ಸದಸ್ಯರಂತೆ ಪ್ರೀತಿಯಿಂದ ಒಬ್ಬರನ್ನೊಬ್ಬರು ಸ್ವಾಗತಿಸುತ್ತಾ ಪ್ರತಿಯೊಬ್ಬರ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್ ಮಾತನಾಡಿ, ಯಾವುದೇ ಸಂಸ್ಥೆಯ ಅಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ. ಇಂದು ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ. ಹಳೆ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ಇಲ್ಲಿಯ ಪ್ರಸಕ್ತ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಪ್ರಯತ್ನ ಸೇರಿ ಸಂಸ್ಥೆಯು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.
ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರತಿಮಾ ಹೆಗ್ಡೆ ಹಾಗೂ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಡಾ. ಪ್ರಕಾಶ್ ಬಿ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.
ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್. ಡಿ ಕೋಸ್ಟಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕರು, ಉಪನ್ಯಾಸಕರಾದ ಭರತ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಹಿರಿಯ ವಿದ್ಯಾರ್ಥಿ ಸಂಘದ ನೂತನ ಸಮಿತಿ ರಚಿಸಲು 15 ಮಂದಿಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಹನ್ನೊಂದು ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸುಧೀರ್ಘ ಸೇವೆಯನ್ನು ಸಲ್ಲಿಸಿದ ರೆ.ಫಾ ವಿಜಯ್ ಲೋಬೋ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮನೋರಂಜನಾ ಆಟೋಟಗಳನ್ನು ನಡೆಸಿ ಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿ ವೃಂದ ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಉಪನ್ಯಾಸಕರಾದ ಸಂದೇಶ್ ಜೋನ್ ಲೋಬೋ ವಂದಿಸಿ, ಹಿರಿಯ ವಿದ್ಯಾರ್ಥಿನಿ ಶ್ರೀದೇವಿ. ಕೆ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ