ವಿಸಿಇಟಿ: ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಪ್ರೊ. ಪ್ರದೀಪ್ ಕುಮಾರ್

Upayuktha
0



ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಪ್ರೊ.ಪ್ರದೀಪ್ ಕುಮಾರ್.ಕೆ.ಜಿ ಪದ ಸ್ವೀಕಾರ ಮಾಡಿದ್ದಾರೆ. ಹದಿನೈದು ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಕಂಪ್ಯೂಟರ್ ಸೈನ್ಸ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. 


ನಿರ್ವಹಣೆಯಲ್ಲಿಯೂ ಚಾಕಚಕ್ಯತೆಯನ್ನು ಹೊಂದಿರುವ ಇವರು ವಿಭಾಗವನ್ನು ಸಮರ್ಥವಾಗಿ ಮುನ್ನಡೆಸಬಲ್ಲವರಾಗಿದ್ದಾರೆ. ಮಾಹಿತಿ ತಂತ್ರಜ್ಞಾನದಲ್ಲಿ ಪ್ರತಿಬಿಂಬ ಸಂಸ್ಕರಣೆ ಎನ್ನುವ ವಿಷಯದಲ್ಲಿ ಸಂಶೋಧನೆಯನ್ನು ನಡೆಸುತ್ತಿದ್ದು, ಇವರ ಸಂಶೋಧಿತ ಬರಹಗಳು 10 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. 


ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top