2025-26ನೇ ಸಾಲಿನಿಂದ ಅಂಬಿಕಾದಲ್ಲಿ ವೇದಗಣಿತ ಹಾಗೂ ಬರವಣಿಗೆ ತರಗತಿ ಆರಂಭ

Upayuktha
0

ಹೆತ್ತವರ ಸಭೆಯಲ್ಲಿ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಅವರಿಂದ ಘೋಷಣೆ



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ  ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಅವರು ಮಾತನಾಡಿ ರಜಾ ದಿನಗಳಲ್ಲಿ ಮಕ್ಕಳು ನಮ್ಮ ಸಂಸ್ಕೃತಿಯ ಬಗ್ಗೆ ಕಲಿಯಲು ಪ್ರೋತ್ಸಾಹಿಸಬೇಕು. ಮಕ್ಕಳನ್ನು ಟಿ.ವಿ., ಮೊಬೈಲ್‌ಗಳಿಂದ ದೂರವಿರಿಸಿ ಸಂಸ್ಕಾರಗಳನ್ನು ನೀಡುವ ಕೆಲಸ ಮಾಡಬೇಕು ಎಂದು ತಿಳಿಸಿದರು.


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ ಸುಬ್ರಮಣ್ಯ ನಟ್ಟೋಜ ಮಾತಾಡಿ ಮಕ್ಕಳಲ್ಲಿ ಶಿಸ್ತು ಅತ್ಯಗತ್ಯವಾಗಿ ಇರಲೇಬೇಕು. ಶಿಸ್ತನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಬಹುದು. 2025 - 26ನೇ ಸಾಲಿನಿಂದ ವೇದ ಗಣಿತ ಹಾಗೂ ಉತ್ತಮ ಬರವಣಿಗೆಯ  ತರಗತಿಗಳನ್ನು ಅಂಬಿಕಾ ವಿದ್ಯಾಲಯದಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು.


ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ಉಪಸ್ಥಿತರಿದ್ದರು. ಶಿಕ್ಷಕಿ ಸುಷ್ಮಾ ಮಿಥುನ್ ಕಾರ್ಯಕ್ರಮ ನಿರ್ವಹಿಸಿದರು.



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top