ಗುರು-ಶಿಷ್ಯ ಸಂಬಂಧ ಎಂದಿಗೂ ಧೃಢವಾಗಿರಬೇಕು: ಭೋಜೇ ಗೌಡ

Upayuktha
0



ಪುತ್ತೂರು: ಸಾಧನೆಯ ಹಾದಿಯಲ್ಲಿರುವವ ಕಷ್ಟಗಳನ್ನೆದುರಿಸಿ ಮುಂದೆ ಸಾಗುತ್ತಾನೆ. ಕಲ್ಲು ಮುಳ್ಳಿನ ಹಾದಿಯಿಂದ ಹೂವಿನ ಹಾದಿಯತ್ತ ನಡೆಯುವ ಪ್ರಕ್ರಿಯೆ ಇದು. ಸಾಧಿಸಿದ ಬಳಿಕವೂ ನಮ್ಮತನವನ್ನು ನಾವು ಬಿಡಕೂಡದು. ಗುರು- ಶಿಷ್ಯರ ನಡುವಿನ ಸಂಬಂಧ ಎಂದೆಂದಿಗೂ ದೃಢವಾಗಿರಬೇಕು.ನಾವು ಗಳಿಸುವ ಶಿಕ್ಷಣವು ಜೀವನವನ್ನು ಸಮರ್ಥವಾಗಿ ರೂಪಿಸಬೇಕು" ಎಂದು ವಿಧಾನ ಪರಿಷತ್ ಸದಸ್ಯ, ಕಾಲೇಜಿನ ಹಿರಿಯ ವಿದ್ಯಾರ್ಥಿ ಭೋಜೇ ಗೌಡ ನುಡಿದರು.


ಇವರು ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಎಂ.ಐ.ಟಿ ಮಣಿಪಾಲದ ಶೈಕ್ಷಣಿಕ ವಿಭಾಗದ ಸಹ ನಿರ್ದೇಶಕ ಡಾ. ರವಿಪ್ರಕಾಶ್ ವೈ "ಎಲ್ಲವನ್ನೂ ಪ್ರಶ್ನಿಸುವ ಗುಣ ಕುತೂಹಲವನ್ನು ಬೆಳೆಸುತ್ತದೆ. ಇದು ನಮ್ಮ ಪ್ರಗತಿಗೆ ಸಹಾಯಕ. ಉದ್ಯೋಗಾವಕಾಶಗಳು ಒದಗಿಬಂದಾಗ ನಮ್ಮ ನಡವಳಿಕೆ ಹಾಗೂ ಕೌಶಲ್ಯ  ಮುಂತಾದ ಗುಣಗಳು ಅಗತ್ಯ. ಅದನ್ನು ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಾಗಲೇ ಮೈಗೂಡಿಸಿಕೊಳ್ಳಬೇಕು’’ ಎಂದರು.


ಈ ಸಂದರ್ಭದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಪೂರ್ವಾಧ್ಯಕ್ಷ ಎಸ್.ಆರ್ ರಂಗಮೂರ್ತಿ ಅಧ್ಯಕ್ಷೀಯ ಮಾತುಗಳನ್ನಾಡುತ್ತಾ, ವಿದ್ಯಾರ್ಥಿಗಳು ವಿದ್ಯೆಯನ್ನು ಪಡೆದುಕೊಳ್ಳುವುದು ಮಾತ್ರವಲ್ಲದೆ ತನ್ನ ರಾಷ್ಟ್ರವನ್ನು, ಧರ್ಮವನ್ನು ಹಾಗೂ ಸಂಸ್ಕೃತಿಯನ್ನು ಪ್ರೀತಿಸಿ ತನ್ನ ವ್ಯಕ್ತಿತ್ವವನ್ನು ಸದೃಧವಾಗಿ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.


ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ವಾರ್ಷಿಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಅಧ್ಯಾಪಕರನ್ನು  ಗೌರವಿಸಲಾಯಿತು. ವೈದಿಕ ವಿದ್ವಾಂಸ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿ ಕೃಷ್ಣ ಕೆ.ಎನ್, ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ. ಶ್ರೀಧರ ಹೆಚ್.ಜಿ, ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ವಿಶೇಷಾಧಿಕಾರಿ ಡಾ. ಶ್ರೀಧರ ನಾಯಕ್, ಆಡಳಿತ ಮಂಡಳಿಯ ಸದಸ್ಯೆ ಶುಭಾ ಅಡಿಗ, ಎ .ಜಗನ್ನಾಥ್ ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ಶಿವಪ್ರಸಾದ್ ಕೆ.ಎಸ್ ಸ್ವಾಗತಿಸಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ವಿದ್ಯಾರ್ಥಿ ಕ್ಷೇಮಪಾಲಕ ಡಾ. ಅರುಣ್ ಪ್ರಕಾಶ್ ವಂದಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾ ಎಸ್ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮ ಹಾಗೂ ಕಾಲೇಜಿನ ಯಕ್ಷರಂಜಿನಿಯ ವಿದ್ಯಾರ್ಥಿಗಳಿಂದ ವರಹಾವತಾರ ವರಹಮಾಲಿಕೆ ಎನ್ನುವ ಯಕ್ಷಗಾನ ನಡೆಯಿತು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top