ಎಸ್‌ಡಿಎಂ ಬಿ.ಎಡ್, ಡಿ.ಎಡ್ ಕಾಲೇಜಿನಲ್ಲಿ ಕ್ವಿಜ್ ಕಾರ್ಯಕ್ರಮ

Upayuktha
0


ಉಜಿರೆ: ಎಸ್. ಡಿ. ಎಂ. ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ಮತ್ತು ಎಸ್. ಡಿ. ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಎಡ್) ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ, ಬೆಳ್ತಂಗಡಿ ತಾಲೂಕು ವೇದಿಕೆಯಿಂದ ಕ್ವಿಜ್ ಕಾರ್ಯಕ್ರಮವನ್ನು ಮಾರ್ಚ್ 15 ರಂದು ಆಯೋಜಿಸಲಾಗಿತ್ತು.


ಮುಖ್ಯ ಅತಿಥಿ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಸಲ್ಡಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡುತ್ತಾ ಈ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವು ಸದಾ ಕುತೂಹಲ ಮೂಡುವಂತೆ ಮಾಡುವುದರೊಂದಿಗೆ ಜ್ಞಾನವನ್ನು ಪಡೆಯಲು ಸಹಕಾರಿ. ಶಿಕ್ಷಣ ಕ್ಷೇತ್ರದಲ್ಲಿ ಜ್ಞಾನ, ಸಾಮರ್ಥ್ಯಗಳು ಮತ್ತು ಕೌಶಲ್ಯಗಳಲ್ಲಿನ ಬೆಳವಣಿಗೆಯನ್ನು ಮೌಲ್ಯಮಾಪನ ಮಾಡಲು ಸಾಧ್ಯವಾಗುತ್ತದೆ ಆದುದರಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕವಾಗಿ ತೊಡಗಿಸಿಕೊಂಡಾಗ ಜ್ಞಾನಾರ್ಜನೆ ಮಟ್ಟ ಹೆಚ್ಚಾಗುತ್ತದೆ ಎಂದು ಅಭಿಪ್ರಾಯಪಟ್ಟರು.


ಅಳದಂಗಡಿ ಅರಮನೆ ನಗರಿಯಲ್ಲಿ ಆರಂಭವಾದ ಆಮಂತ್ರಣ ಸಾಹಿತ್ಯ ಸಂಘಟನೆ ಇಂದು ಉನ್ನತ ಮಟ್ಟದಲ್ಲಿ ಬೆಳೆದು ನಿಂತಿದ್ದು ಪ್ರತಿಭೆಗಳ ಅನಾವರಣಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸಿದೆ ಎಂದು ಪತ್ರಕರ್ತ ಸಂತೋಷ್  ಪಿ. ಕೋಟ್ಯಾನ್ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.


ಆಮಂತ್ರಣ ವೇದಿಕೆಯ ಸಂಚಾಲಕ ವಿಜಯ್ ಕುಮಾರ್ ಜೈನ್, ಆಮಂತ್ರಣ ವೇದಿಕೆಯ ರಾಜ್ಯ ಸದಸ್ಯೆ ಶ್ರೀಮತಿ ಆಶಾ ಅಡೂರು ವೇದಿಕೆಯಲ್ಲಿದ್ದರು. ಬೆಳ್ತಂಗಡಿ ಘಟಕ ಅಧ್ಯಕ್ಷೆ ಶ್ರೀಮತಿ ವಿದ್ಯಾ ಅಡೂರು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಅಖಿಲ ಮತ್ತು ಯಶಸ್ ಸ್ಪರ್ಧೆ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಸಹ ಪ್ರಾಧ್ಯಾಪಕರು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳೆಲ್ಲರೂ ಉಪಸ್ಥಿತರಿದ್ದರು. 


ಶ್ರೀದೇವಿ ಸಚಿನ್ ಪ್ರಾರ್ಥಿಸಿ, ಕಾಲೇಜಿನ ಸಹ ಪ್ರಾಧ್ಯಾಪಕ ಮಂಜು ಆರ್ ಸ್ವಾಗತಿಸಿ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಕಾರ್ಯದರ್ಶಿ ಅಶ್ವಿಜಾ ಶ್ರೀಧರ್ ವಂದಿಸಿ, ರೇಣುಕಾ ಸುಧೀರ್ ಅರಸಿನಮಕ್ಕಿ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top