ತಿರುವನಂತಪುರಂ: ಕೇರಳ ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಸೋಮವಾರ ఆయ్మె ಮಾಡಲಾಗಿದೆ. ತಿರುವನಂತಪುರಂನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಪಕ್ಷದ ಕೇಂದ್ರದ ವೀಕ್ಷಕ ಪ್ರಹ್ಲಾದ್ ಜೋಷಿ ಅವರು ರಾಜೀವ್ ಚಂದ್ರಶೇಖರ್ ಹೆಸರು ಘೋಷಿಸಿದ್ದಾರೆ.
ನಿರ್ಗಮಿತ ಅಧ್ಯಕ್ಷ ಕೆ.ಸುರೇಂದ್ರನ್, ಪಕ್ಷದ ಧ್ವಜವನ್ನು ಚಂದ್ರಶೇಖರ್ ಅವರಿಗೆ ಹಸ್ತಾಂತರಿಸಿ ಶುಭಕೋರಿದರು. ಸೋಮವಾರವೇ ಚಂದ್ರಶೇಖರ್ ಅವರು ಅಧಿಕಾರವನ್ನೂ ಸ್ವೀಕರಿಸಿದ್ದಾರೆ. ಉದ್ಯಮಿಯೂ ಆಗಿರುವ ಚಂದ್ರಶೇಖರ್ 2 ದಶಕಗಳ ರಾಜಕೀಯ ಅನುಭವ ಹೊಂದಿದ್ದಾರೆ. ಕರ್ನಾಟಕದಿಂದ 3 ಅವಧಿಗೆ ರಾಜ್ಯಸಭೆ ಸದಸ್ಯರಾಗಿ, 2021ರಿಂದ 2024ರವರೆಗೆ ಕೇಂದ್ರ ಸರ್ಕಾರದಲ್ಲಿ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.
ನೂತನ ರಾಜ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ವೇಳೆ ನಿರ್ಗಮಿತ ಅಧ್ಯಕ್ಷ ಕೆ. ಸುರೇಂದ್ರನ್ ಮತ್ತು ರಾಜ್ಯ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಸೇರಿ ಬಿಜೆಪಿಯ ಎಲ್ಲಾ ಪ್ರಮುಖ ರಾಜ್ಯ ನಾಯಕರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜೀವ್ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಕೇರಳ ಬಿಜೆಪಿ ಹೊಸ ಎತ್ತರಕ್ಕೆ ಬೆಳೆಯಲಿದೆ. ಕೇರಳದಲ್ಲಿ ಬಿಜೆಪಿಗೆ ಶೇ.19ಷ್ಟು ಮತ ಹಂಚಿಕೆಯಾಗಿದ್ದು, ಭವಿಷ್ಯದಲ್ಲಿ ರಾಜೀವ್ ಅವರ ನಾಯಕತ್ವದಲ್ಲಿ ಬಿಜೆಪಿ ಕೇರಳದಲ್ಲಿ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ