ಮಂಗಳೂರು: ದ.ಕ.ಜಿಲ್ಲಾಡಳಿತ, ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಯೂತ್ ರೆಡ್ ಕ್ರಾಸ್, ಮಂಗಳೂರು ವಿ.ವಿ. ಸಹಯೋಗದಲ್ಲಿ ಜೀವ ಜಲ ಉಳಿಸಿ ಅಭಿಯಾನ ಮಾ.24 ರಂದು ಬೆಳಗ್ಗೆ 9.30ಕ್ಕೆ ದ.ಕ.ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಬ್ರಾಯನ್ ಪಿಂಟೊ, ಕಾರ್ಯದರ್ಶಿ ರಾಜೇಶ್ ಸೀತಾರಾಮ್, ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ, ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ