ನೀರು ಉಣಿಸಿ ಪ್ರಾಣಿ ಪಕ್ಷಿಗಳ ಜೀವ ರಕ್ಷಿಸಿ

Upayuktha
0

ಜೀವ ಜಲ ಉಳಿಸಿ ಅಭಿಯಾನದಲ್ಲಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ವಿನಂತಿ




ಮಂಗಳೂರು: ಸಕಲ ಜೀವ ಸಂಕುಲಕ್ಕೆ ನೀರು ಆಧಾರವಾಗಿದ್ದು, ಜೀವ ಜಲ ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ತಾಪಮಾನ ಹೆಚ್ಚುತ್ತಿದ್ದು ಪ್ರಾಣಿ ಪಕ್ಷಿಗಳ ಮೂಕ ವೇದನೆಯನ್ನು ನಾವು ಅರ್ಥಮಾಡಿಕೊಳ್ಳಬೇಕು. ನೀರು ಉಣಿಸಿ ಪ್ರಾಣಿ ಪಕ್ಷಿಗಳ ಜೀವ ರಕ್ಷಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು.


ದ.ಕ.ಜಿಲ್ಲಾಡಳಿತ, ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಕಾಲೇಜು ಸಹಯೋಗದಲ್ಲಿ ಸೋಮವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಜೀವ ಜಲ ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ವಿದ್ಯಾರ್ಥಿಗಳು ಮನೆ ಪರಿಸರ, ಕಂಪೌಂಡ್, ಟೆರೇಸ್‌ನಲ್ಲಿ ಸಣ್ಣ ಪಾತ್ರೆ ಅಥವಾ ಸಿಮೆಂಟ್ ತೊಟ್ಟಿಗಳಲ್ಲಿ ನೀರು ಇಡುವ ಮೂಲಕ ಪ್ರಾಣಿ ಪಕ್ಷಿಗಳಿಗೆ ನೆರವಾಗಬೇಕು  ಎಂದು ಜಿಲ್ಲಾಧಿಕಾರಿ ಹೇಳಿದರು.


ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಬ್ರಾಯನ್ ಪಿಂಟೊ, ಕಾರ್ಯದರ್ಶಿ ರಾಜೇಶ್ ಸೀತಾರಾಮ್, ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,  ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.


ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ನ ನಿಯೋಜಿತ ಅಧ್ಯಕ್ಷ ಭಾಸ್ಕರ ರೈ ಕಟ್ಟ, ಮಾಜಿ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ರವಿ ಜಲನ್, ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಕಾಲೇಜು ಘಟಕದ ಸಂಯೋಜಕಿ ಭಾರತಿ ಪಿಲಾರ್, ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್. ಬಿ.ಎನ್., ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ಶೆಟ್ಟಿ ದಡ್ಡಂಗಡಿ, ರೆಡ್‌ಕ್ರಾಸ್ ನಿರ್ದೇಶಕ ರವೀಂದ್ರನಾಥ್ ಉಚ್ಚಿಲ ಮುಂತಾದವರು ಉಪಸ್ಥಿತರಿದ್ದರು. ಅಭಿಯಾನದ ಅಂಗವಾಗಿ  ಪ್ರಾಣಿ, ಪಕ್ಷಿಗಳಿಗೆ ನೀರುಣಿಸಲು ವಿದ್ಯಾರ್ಥಿಗಳಿಗೆ ಸಣ್ಣ ಸಿಮೆಂಟ್ ತೊಟ್ಟಿಗಳನ್ನು ವಿತರಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top