ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪವಾದ ಶಕ್ತಿನಗರದ ಘಟನೆ

Upayuktha
0


ಬೆಂಗಳೂರು: ಮಂಗಳೂರಿನ ಶಕ್ತಿನಗರದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆ ಇಂದು ವಿಧಾನಸಭೆಯಲ್ಲಿ ಪ್ರಸ್ತಾಪಗೊಂಡಿತು. ಘಟನೆಗೆ   ಸಂಬಂಧಿಸಿ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಪ್ರಕರಣದ ವಿರುದ್ಧ ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿ ರಾಜ್ಯ ಬಿಜೆಪಿ ನಾಯಕರು ಕಾಮತ್ ಬೆಂಬಲಕ್ಕೆ ನಿಂತರು.


ಬಿಜೆಪಿ ಹಿರಿಯ ಶಾಸಕರಾದ ಅರವಿಂದ್ ಬೆಲ್ಲದ್ ವಿಷಯ ಪ್ರಸ್ತಾಪಿಸಿ ಶಾಸಕ ಕಾಮತ್ ರವರ ಮೇಲಿನ ಸುಳ್ಳು ಪ್ರಕರಣ ದಾಖಲಾಗಿರುವುದನ್ನು ಖಂಡಿಸಿದರು. ನಂತರ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿನಕ್ಕೆ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಶಾಸಕರುಗಳ ಮೇಲೆ ಈ ರೀತಿಯಾಗಿ ಸುಳ್ಳು ಪ್ರಕರಣಗಳು ದಾಖಲಾಗುತ್ತಾ ಹೋದರೆ ಇನ್ನು ಮೇಲೆ ಯಾವ ಕಾರ್ಯಕ್ರಮಕ್ಕೂ ಹೋಗಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 


ಧಾರ್ಮಿಕ ಕಾರ್ಯಕ್ರಮ ಮುಗಿಸಿ ಮರಳು ಸಂದರ್ಭದಲ್ಲಿ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ನನಗೆ ಘೇರಾವ್ ಹಾಕಲು ಯತ್ನಿಸಿದ್ದು ಮಾತ್ರವಲ್ಲದೇ ನನ್ನ ಜೊತೆಗಿದ್ದ ಪರಿಶಿಷ್ಟ ಸಮುದಾಯದ ಬಂಧುವೊಬ್ಬನ ಮೇಲೆ ಹಲ್ಲೆ ನಡೆಸಿ, ನಮ್ಮ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ಕಾಮತ್ ರವರು ಸದನದಲ್ಲಿ ಹೇಳಿದರು.


ಅಂತಿಮವಾಗಿ ಗೃಹ ಸಚಿವರು ಈ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಸೂಕ್ತ ಕ್ರಮಕೈಗೊಳ್ಳು ವುದಾಗಿ ಸದನಕ್ಕೆ ಭರವಸೆ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top