ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಐದು ಕೃತಿಗಳ ಲೋಕಾರ್ಪಣೆ ಸಾಧಕರಿಗೆ ಸನ್ಮಾನ

Upayuktha
0



ಶಿವಮೊಗ್ಗ: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ 30 ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತೀ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. 


ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ, ಗಾಯನ ಕ್ಷೇತ್ರದಲ್ಲಿ ಹಾಗೂ ಸೇವಾ ಕ್ಷೇತ್ರದಲ್ಲಿ ಮತ್ತು ಕಾವ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಾಷ್ಟ್ರಮಟ್ಟದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. 


ಸುಮಾರು ಎರಡು ನೂರು ಜನಗಳಿಗೆ ಸನ್ಮಾನ ಮಾಡಿದ ಕಾರ್ಯಕ್ರಮದಲ್ಲಿ  ಐದು ಕೃತಿಗಳ ಲೋಕಾರ್ಪಣೆಯನ್ನು ರಾಜ್ಯಧ್ಯಕ್ಷ ಮಧು ನಾಯ್ಕ ಲಂಬಾಣಿ ಮಾಡಿದರು.  ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದ ಹಿರಿಯ ಸಾಹಿತಿ ಡಾಕ್ಟರ್ ಹಸೀನರವರು ಕವಿತೆ ವಾಚಿಸುವ ಮುಖೇನ ನೆರವೇರಿಸಿದರು. 


ಕಾರ್ಯಕ್ರಮದ ಅಧ್ಯಕ್ಷತೆ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ರಾಮು ಎನ್ ರಾಥೋಡ್ ವಹಿಸಿದ್ದರು.   ಪ್ರಾಸ್ತಾವಿಕ ನುಡಿಗಳನ್ನು ಬೆಂಗಳೂರು  ಗ್ರಾಮಾಂತರ ಜಿಲ್ಲಾಧ್ಯಕ್ಷರು ಚಂದ್ರಶೇಖರ್ ಹಡಪದ  ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಂಘದ ಗೌರವ ಅಧ್ಯಕ್ಷರಾದ ಸಾಹಿತಿ ಗೊರೂರು ಅನಂತರಾಜು,  ಗೋಪಾಲ ನಾಯಕ್ ವಾಯ್ಸ್ ಆಫ್ ಇವರು ಭಾಗವಹಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಘಟಕದಿಂದ ಪ್ರಾಯೋಜಿತ ಕಾರ್ಯಕ್ರಮಗಳು ನೆರವೇರಿದವು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top