ಬಳ್ಳಾರಿ: ಬಳ್ಳಾರಿಯ ವೀರಶೈವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳು ಮತ್ತು ರೆಡ್ ರಿಬ್ಬನ್ ಕ್ಲಬ್ ಸಹಯೋಗದೊಂದಿಗೆ ಮಾ.03 ಮತ್ತು 04 ರಂದು ಏಡ್ಸ್ ಕುರಿತು ಭಾಷಣ ಮತ್ತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಕುಮಾರಿ ಪ್ರೇರಿತಾ, ಬಿ.ಎಸ್.ಸಿ ಪ್ರಥಮ ವರ್ಷದ ವಿದ್ಯಾರ್ಥಿನಿ, ದ್ವಿತೀಯ ಬಹುಮಾನ ಯಲ್ಲಪ್ಪ ಮತ್ತು ಅಂಕಿತ್ ಕುಮಾರ್, ಬಿ.ಎಸ್.ಸಿ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳು, ತೃತೀಯ ಬಹುಮಾನ ಕುಮಾರಿ ಐಶ್ವರ್ಯ ಮತ್ತು ನಿಖಿಲ್ ಸ್ಟಾಲಿನ್ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪಡೆದುಕೊಂಡರು.
ಈ ಸ್ಪರ್ಧೆಯನ್ನು ರೆಡ್ ರಿಬ್ಬನ್ ಕ್ಲಬ್‌ನ ಕೌನ್ಸಲರ್ ಆದ ಜಯರಾಂ, ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಶರಣಬಸವ ಮತ್ತು ಡಾ. ಭ್ರಮರಾಂಭ. ವೈ ನಡೆಸಿಕೊಟ್ಟರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ