ಸ್ಟ್ರಾಟೆಜಿಕ್ ಮ್ಯಾನೇಜ್ಮೆಂಟ್: ಪಠ್ಯ ಪುಸ್ತಕ ಅನಾವರಣ

Upayuktha
0


ಮಂಗಳೂರು: ಕೆನರಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹಾರ್ದಿಕ್ ಪಿ ಚೌಹಾಣ್ ಅವರು ಬರೆದ ಸ್ಟ್ರಾಟೆಜಿಕ್ ಮ್ಯಾನೇಜ್ಮೆಂಟ್ ಎಂಬ ಒಪ್ಶನಲ್ ಕೋರ್ಸ್ ಪಠ್ಯ ಪುಸ್ತಕವನ್ನು ಕಾಲೇಜಿನ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.


ಮಂಗಳೂರು ವಿಶ್ವವಿದ್ಯಾನಿಲಯದ ಎರಡನೇ ಸೆಮಿಸ್ಟರ್ ಬಿ.ಕಾಂ (ಎಸ್‌ಇಪಿ) ತರಗತಿಗಾಗಿ ಇದನ್ನು ಸಿದ್ಧಪಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಇಂತಹ ಪುಸ್ತಕಗಳು ಇನ್ನಷ್ಟು ಪ್ರಕಟವಾಗಲಿ ಎಂದು ಕಾಲೇಜಿನ ಸಂಚಾಲಕರಾದ ಸಿಎ ಎಂ ಜಗನ್ನಾಥ ಕಾಮತ್ ಶುಭ ಹಾರೈಸಿದರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ ಉಪಪ್ರಾಂಶುಪಾಲೆ ಡಾ. ಕಲ್ಪನಾ ಪ್ರಭು, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸೀಮಾ ಪ್ರಭು, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ದೇಜಮ್ಮ ಎ, ಶ್ರೀಮತಿ ಪುಷ್ಪಲತಾ ಮುಂತಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top