ನೀರು ಜೀವಜಲ - ಬದುಕಿನ ಮೂಲ

Upayuktha
0



ಸುರತ್ಕಲ್‌: ವಿಶ್ವ ಜಲ ದಿನವು ಸುಸ್ಥಿರ ಅಭಿವೃದ್ಧಿಯ ಗುರಿಯೊಂದಿಗೆ ಎಲ್ಲರಿಗೂ ನೀರು ಮತ್ತು ನೈರ್ಮಲ್ಯ ಜೀವನ ಖಾತರಿ ಪಡಿಸಲು ಜಾಗತಿಕ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ. ಅತಿ ಶೀಘ್ರವಾಗಿ ಮಳೆ ನೀರನ್ನು ಸಂಗ್ರಹಿಸುವ ವಿಧಾನಗಳನ್ನು ಅನುಷ್ಠಾನಗೊಳಸುವ ಅಗತ್ಯವಿದ್ದು ಹಿಂದು ವಿದ್ಯಾದಾಯಿನೀ ಸಂಘವು ಈಗಾಗಲೇ ಮಳೆ ನೀರು ಸಂಗ್ರಹಣೆಗೆ ಪೂರಕವಾದ ವಿಧಾನಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಹಿಂದು ವಿದ್ಯಾದಾಯಿನೀ ಸಂಘ (ರಿ)ಯ ಅಧ್ಯಕ್ಷ ಹೆಚ್. ಜಯಚಂದ್ರ ಹತ್ವಾರ್ ನುಡಿದರು.


ಅವರು ಹಿಂದು ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ಮಾನವ ಹಕ್ಕುಗಳ ಘಟಕ ಮತ್ತು ವಿಜ್ಞಾನ ವಿಭಾಗಗಳು ಜಂಟಿಯಾಗಿ ಮಾರ್ಚ್ 22ರಂದು ಆಯೋಜಿಸಿದ್ದ ವಿಶ್ವ ಜಲ ದಿನದ ಅಂಗವಾಗಿ ಬದುಕಿಗಾಗಿ ನೀರು ಧ್ಯೇಯ ವಾಕ್ಯದಡಿ ನಡೆದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. 


ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ಗೋಪಾಲ ಎಂ. ಗೋಖಲೆ ಮಾತನಾಡಿ ನೀರನ್ನು ಸಂರಕ್ಷಣೆ ಮಾಡುವ ಜವಾಬ್ದಾರಿಯು ವಿದ್ಯಾರ್ಥಿ ಸಮುದಾಯದ ಮೇಲಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಹರೀಶ ಆಚಾರ್ಯ ಪಿ. ಮಾತನಾಡಿ ಅಂತರ್ಜಲ ಮಟ್ಟ ಕುಸಿತ, ನೀರಿನ ಮಾಲಿನ್ಯ, ಶುದ್ಧ ಕುಡಿಯುವ ನೀರನ ಸಮಸ್ಯೆಗಳನ್ನು ಪರಿಹರಿಸುವತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕೆಂದರು. 


ಸಂಪನ್ಮೂಲ ವ್ಯಕ್ತಿ ಜಿಲ್ಲಾ ಅಂತರ್ಜಲ ಇಲಾಖೆಯ ಹಿರಿಯ ಭೂ ವಿಜ್ಞಾನಿ ಶೇಕ್ ದಾವೂದ್ ವಿದ್ಯಾರ್ಥಿಗಳಿಗೆ ನೀರು ಸಂರಕ್ಷಣಾ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಉಪಪ್ರಾಂಶುಪಾಲ ಪ್ರೊ. ನೀಲಪ್ಪ ವಿ., ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ವಾಮನ ಕಾಮತ್, ಗ್ರಾಹಕ ಹಕ್ಕುಗಳ ಸಂಘದ ಸಂಯೋಜಕಿ ದಯಾ ಸುವರ್ಣ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಶಾಂತ್ ಎಂ.ಡಿ., ಗ್ರಂಥ ಪಾಲಕಿ ಡಾ. ಸುಜಾತ ಬಿ. ಉಪನ್ಯಾಸಕರಾದ ಡಾ. ಆಶಾ, ಕುಮಾರ್ ಮಾದರ್, ಡಾ. ಸಂತೋಷ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.


ಮಾನವ ಹಕ್ಕು ಕೋಶದ ಸಂಯೋಜಕಿ ಡಾ. ಆಶಾಲತಾ ಪಿ. ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ವಿಜ್ಞಾನ ಸಂಘದ ಸಂಯೋಜಕಿ ಅದಿತಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಸಂಧ್ಯಾಶ್ರೀ ವಂದಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top