ಮಹಿಳಾ ಮತ್ತು ಮಕ್ಕಳ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನೆ

Upayuktha
0


ಮಂಗಳೂರು: ಮಂಗಳೂರು ತಾಲೂಕು ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ  ಅನುಷ್ಠಾನಗೊಂಡಿರುವ ವಿವಿಧ ಯೋಜನೆಗಳ ಸಮಿತಿ ಸಭೆ ಗ್ರೇಡ್ 2 ತಹಶೀಲ್ದಾರ್ ರಫೀಕ್ ಚೌಧರಿ  ಅಧ್ಯಕ್ಷತೆಯಲ್ಲಿ ಶುಕ್ರವಾರ  ತಾಲೂಕು ಕಚೇರಿ ಕೋರ್ಟ್ ಹಾಲ್‍ನಲ್ಲಿ ನಡೆಯಿತು.


ಅವರು ಮಾತನಾಡಿ,  ಪೊಲೀಸ್ ಠಾಣೆಯಲ್ಲಿ ದಾಖಲಾದ  ಕೌಟುಂಬಿಕ  ದೌರ್ಜನ್ಯ ಪ್ರಕರಣ, ಮಹಿಳೆಯರ ಮತ್ತು ಮಕ್ಕಳ ಮಾರಾಟ ಪ್ರಕರಣಗಳು, ಬಾಲ್ಯ ವಿವಾಹ, ಮಾದಕ ವ್ಯಸನದಂತಹ ಪ್ರಕರಣಗಳ ಮಾಹಿತಿಯ ಮಾಸಿಕ ವರದಿಯನ್ನು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ  ನೀಡಬೇಕು ಎಂದು ಸೂಚಿಸಿದರು.


ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ  ಅಂಗನವಾಡಿ ಕಾರ್ಯಕರ್ತೆಯರ  ಸಭೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ತಾಯಂದಿರ ಸಭೆ, ಸ್ತ್ರೀಶಕ್ತಿ ಸಭೆಗಳಲ್ಲಿ  ಹಾಗೂ ಸೇರಿದ ಜನರಿಗೆ ಮಾದಕ ವಸ್ತು ಸೇವನೆ ಮತ್ತು ಮಾರಾಟ ನಿಷೇಧದ ಬಗ್ಗೆ  ತಿಳಿಸುವಂತೆ ಅವರು ಸೂಚಿಸಿದರು.


ಕೌಟುಂಬಿಕ ದೌರ್ಜನ ತಡೆ ಕಾಯ್ದೆಯಡಿ  ಒಟ್ಟು 31 ಪ್ರಕರಣ ದಾಖಲಾಗಿದೆ.  8900 ವಿಕಲಚೇತನ ಫಲಾನುಭವಿಗಳಿಗೆ ಯು. ಐ. ಡಿ ಚೀಟಿ  ನೀಡಲಾಗಿದೆ. ಆಧಾರ ಯೋಜನೆ ಅಡಿಯಲ್ಲಿ 12 ಮಂದಿ ಫಲಾನುಭವಿಗಳಿಗೆ ಪ್ರೋತ್ಸಾಹಧನ, 700  ವಿಕಲಚೇತನ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿ ವೇತನ, ವಿವಾಹ ಯೋಜನೆ ಅಡಿಯಲ್ಲಿ 20 ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಿಸಲಾಗಿದೆ.  74 ಫಲಾನುಭವಿಗಳಿಗೆ ಸಾಧನ ಸಲಕರಣೆಗಳನ್ನು ಹಾಗೂ 11  ಫಲಾನುಭವಿಗಳಿಗೆ ತ್ರಿಚಕ್ರ ವಾಹನವನ್ನು ನೀಡಲಾಗಿದೆ ಎಂದು ಶಿಶು ಅಭಿವೃದ್ಧಿ  ಯೋಜನಾಧಿಕಾರಿಗಳು  ಸಭೆಗೆ ಮಾಹಿತಿ ನೀಡಿದರು.


ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ  ಮಹೇಶ್ ಹೊಳ್ಳ,  ಮಂಗಳೂರು ಗ್ರಾಮಾಂತರ  ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ ಕಾರಿಗೆ, ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ, ವಿವಿಧ ಇಲಾಖಾಧಿಕಾರಿಗಳು  ಉಪಸ್ಥಿತರಿದ್ದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top