ಉಡುಪಿ: ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ

Upayuktha
0



ಕಟಪಾಡಿ: ಕ್ಷೇತ್ರ ಶಂಕರಪುರ ಸಾಯಿ ಮುಖ್ಯಪ್ರಾಣ ದೇವಸ್ಥಾನ ಇದರ ವತಿಯಿಂದ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ  ಶಂಕರಪುರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾಯಿ ಈಶ್ವರ್ ಗುರೂಜಿ, ಪ್ರಾಣಿ ಪಕ್ಷಿಗಳಿಗೂ ಕೂಡ ಆತ್ಮವಿದೆ. ಪ್ರಾಣಿ ಪಕ್ಷಿಗಳು ವಿವಿಧ ಕಾರಣದಿಂದ ಸಾವನ್ನಪ್ಪಿದಾಗ ಇದಕ್ಕೆ ಮೋಕ್ಷ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ ಕಾರ್ಯಕ್ರಮ ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದರು.


ವೇದಿಕೆಯಲ್ಲಿ ಮಠದ ಟ್ರಸ್ಟಿ ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ ಸಮಾಜ ಸೇವಕರಾದ ಪ್ರಶಾಂತ್ ಪೂಜಾರಿ, ವಿನೋದ್ ಪಡೀಲ್, ಚಂದ್ರಹಾಸ್, ಸಂತೋಷ ಉದ್ಯಾವರ ಮುಂತಾದವು ಉಪಸ್ಥಿತರಿದ್ದರು.


ಮಠದ ಪ್ರಮುಖರಾದ ಸತೀಶ್, ನೀಲೇಶ್ ಮುಂತಾದವರು ಸಹಕರಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ, ವಂದಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top