ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಕುರಿತ ಸೆಮಿನಾರ್ ನಲ್ಲಿ ಪ್ರೊ. ಡಾ. ಗೋಪಾಲ ಮುಗೇರಾಯ
ಉಡುಪಿ: "ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಜ್ಞಾನಾಧಾರಿತ ಶಿಕ್ಷಣ ವ್ಯವಸ್ಥೆಯೊಂದೇ ಸೂಕ್ತ ಮಾರ್ಗ. ಇಲ್ಲಿ ಶಿಲ್ಪಿಗಳಂತೆ ಇರುವ ಶಿಕ್ಷಕರ ಪಾತ್ರವೂ ಹಿರಿದಾದದ್ದು. ಇಂದಿನ ಶಿಕ್ಷಣ ಪದ್ಧತಿಯನ್ನು ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯನ್ನಾಗಿಸುವಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಒಟ್ಟಾಗಿ ಶ್ರಮವಹಿಸಬೇಕಿದೆ" ಎಂದು ನಿಟ್ಟೆ ಸಂಸ್ಥೆಯ ಪ್ರೊ.ಡಾ. ಗೋಪಾಲ ಮುಗೇರಾಯ ಅಭಿಪ್ರಾಯಪಟ್ಟರು.
ಅವರು ಪೂರ್ಣಪ್ರಜ್ಞ ಆಡಿಟೋರಿಯಂ ನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಹಾಗೂ ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಎಂಬ ವಿಷಯದ ಬಗೆಗೆ ನಡೆದ ಸೆಮಿನಾರ್ ನಲ್ಲಿ ಭಾಗವಹಿಸಿ ಮಾತನಾಡಿದರು.
ಪೂರ್ಣಪ್ರಜ್ಞ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಎ.ಪಿ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಮಂಗಳೂರು ವಿಮಾನ ನಿಲ್ದಾಣದ ನಿವೃತ್ತ ಮುಖ್ಯ ಅಧಿಕಾರಿ ಎಂ.ಆರ್ .ವಾಸುದೇವ್, ಕಾರ್ಕಳದ ನ್ಯಾಯವಾದಿಗಳಾದ ಸುವ್ರತ್ ಕುಮಾರ್, ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನ ನಿರ್ದೇಶಕ ಡಾ.ಪಿ.ಎಸ್ ಐತಾಳ್, ಪೂರ್ಣಪ್ರಜ್ಞ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಮು.ಎಲ್, ಕಾರ್ಯಕ್ರಮ ಸಂಯೋಜಕ ಡಾ.ಸುರೇಂದ್ರ ಶೆಟ್ಟಿ ಅವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ಡಾ.ಪಿ.ಎಸ್ ಐತಾಳ್ ಹಾಗೂ ಡಾ.ರಾಮು.ಎಲ್ ಅವರು ಉನ್ನತ ಶಿಕ್ಷಣದ ಕುರಿತು ವಿಶೇಷ ಉಪನ್ಯಾನ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸುಮಾರು 6೦೦ ಮಂದಿ ಶಿಕ್ಷಕ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕೆ.ಆರ್.ಎಂ.ಎಸ್ ಎಸ್ ನ ಮಂಗಳೂರು ವಿಭಾಗದ ಕಾರ್ಯದರ್ಶಿ ರಾಜೇಶ್ ಅವರು ಶಿಕ್ಷಕರ ಸಂಘಟನೆಯ ಕುರಿತು ಮಾಹಿತಿ ನೀಡಿದರು. ಡಾ.ಸುರೇಂದ್ರ ಶೆಟ್ಟಿ ಅವರು ಸ್ವಾಗತಿಸಿ, ಡಾ.ಭೈರವಿ ಪಂಡ್ಯಾ ಅವರು ವಂದಿಸಿದರು. ಜಯಶ್ರೀ ಎ.ನಾಯಕ್ ಅವರು ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ