ಉಡುಪಿ: ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ದಿ.ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ 'ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ' ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಸಂಸ್ಥೆಯು 2024ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನವನ್ನು ಆಹ್ವಾನಿಸಿದೆ. ಆಸಕ್ತರು ತಮ್ಮ ಸ್ವರಚಿತ ಸ್ವತಂತ್ರ ಕವನ ಸಂಕಲನದ ಮೂರು ಪ್ರತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಅಂಶುಮನೆ , ಬುಡ್ನಾರ್ ರಸ್ತೆ ಕುಂಜಿಬೆಟ್ಟು ಉಡುಪಿ .576102
ಕವನ ಸಂಕಲನಗಳ ಪ್ರತಿಗಳನ್ನು ಕಳುಹಿಸಲು ಕೊನೆಯ ದಿನಾಂಕ ಏಪ್ರಿಲ್ 30, 2025 .
ಪ್ರಶಸ್ತಿಯು ರೂಪಾಯಿ 10,000 ಗೌರವ ನಗದಿನೊಂದಿಗೆ ಪ್ರಶಸ್ತಿಪತ್ರ ಹಾಗೂ ಫಲಕವನ್ನು ಒಳಗೊಂಡಿರುತ್ತದೆ ಎಂದು ಪ್ರಶಸ್ತಿ ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾದ೯ನ್ ತಿಳಿಸಿರುತ್ತಾರೆ.
ಕೃತಿಗಳು ಸ್ವರಚಿತ, ಸ್ವತಂತ್ರ ಕವನ ಸಂಕಲನಗಳಾಗಿರಬೇಕು, ಅನುವಾದ, ರೂಪಾಂತರ, ಶಿಶುಪ್ರಾಸ, ಹನಿಗವನ ಇತ್ಯಾದಿ ಕೃತಿಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ(ರಿ.)ಉಡುಪಿ ಇದರ ಸಂಚಾಲಕ ರವಿರಾಜ್ ಎಚ್. ಪಿ. (98452 40309 )ಅವರನ್ನು ಸಂಪರ್ಕಿಸಬಹುದು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ