ತೆಂಕನಿಡಿಯೂರು ಸ.ಪ್ರ.ದ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ

Upayuktha
0



ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐಕ್ಯೂಎಸಿ ಮತ್ತು ಪ್ಲೇಸ್ಮೆಂಟ್ ಸೆಲ್ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗ ಮಾರ್ಗದರ್ಶಕ ಕೇಂದ್ರದ ಸಹಯೋಗದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಉದ್ಯೋಗ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಮಾಹಿತಿ ಕಾರ್ಯಾಗಾರ ನಡೆಸಲಾಯಿತು.  


ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾದ ಕೆ. ರಾಜು ಮೊಗವೀರ ಕಾರ್ಯಾಗಾರ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಅಂಕಗಳೊಂದಿಗೆ ಪದವಿ ಪಡೆದರಷ್ಟೇ ಸಾಲದು ಆಧುನಿಕ ಮತ್ತು ತಂತ್ರಜ್ಞಾನ ಆಧಾರಿತ ಉದ್ಯೋಗ ಮಾರುಕಟ್ಟೆಯಲ್ಲಿ ಅಂಕಗಳ ಜೊತೆಗೆ ವಿವಿಧ ರೀತಿಯ ಕೌಶಲಗಳಾದ ಸಂವಹನ, ಭಾಷೆ, ಗಣಕಯಂತ್ರದ ಬಳಕೆ, ನಾಯಕತ್ವ, ಸಾಮಾಜಿಕ ಕೌಶಲಗಳನ್ನು ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಕ್ರಿಯಾಶೀಲರಾಗಬೇಕು.  


ಯುವ ಜನತೆ ತಾಳ್ಮೆ, ಏಕಾಗ್ರತೆ, ಕಠಿಣ ಪರಿಶ್ರಮ ಇತ್ಯಾದಿಗಳನ್ನು ರೂಢಿಸಿಕೊಂಡು, ಶೋಕಿ ಜಗತ್ತಿಗೆ ಮಾರು ಹೋಗದೆ ಪಠ್ಯ-ಸಹಪಠ್ಯ-ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದರು.  


ಮಂಗಳೂರು ವಿ.ವಿ. ಉದ್ಯೋಗ ಮಾರ್ಗದರ್ಶನ ಕೇಂದ್ರದ ನಿರ್ದೇಶಕರಾದ ಪ್ರೊಫೇಸರ್ ದಶರಥ ಪಿ. ಪ್ರಾಸ್ತಾವಿಕ ಮಾತುಗಳಲ್ಲಿ ಕಾರ್ಯಕ್ರಮದ ಔಚಿತ್ಯ ತಿಳಿಸಿದರೆ, ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವಕರ ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ವಿದ್ಯಾರ್ಥಿ ಕೇಂದ್ರಿತ ಎಲ್ಲಾ ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಂಡು ತಾವು ಬೆಳಗುವುದರ ಜೊತೆಗೆ ಸಮಾಜವನ್ನು ಬೆಳಗಿಸುವಂತೆ ಆಶಿಸಿದರು.  


ಪ್ರೊಫೇಸರ್ ದಶರಥ ಪಿ. ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಮಾಹಿತಿ ನೀಡಿದರೆ, ರಾಜ್ಯಮಟ್ಟದ ತರಬೇತುದಾರ ಚಂದನ್ ರಾವ್ ಕಾರ್ಪೊರೇಟ್ ವಲಯದಲ್ಲಿ ಉದ್ಯೋಗ ಪಡೆಯಲು ಬೇಕಾದ ಕೌಶಲ್ಯಗಳಾದ ಸಂದರ್ಶನ ಕಲೆ, ರೆಸ್ಯುಮ್ ರೈಟಿಂಗ್, ಗುಂಪು ಚರ್ಚೆ ಮುಂತಾದ ಕೌಶಲಗಳ ಸುಧೀರ್ಘ ತರಬೇತಿ ನೀಡಿದರು.  


ಪದವಿ ವಿಭಾಗದ ಪ್ಲೇಸ್ಮೆಂಟ್ ಆಫೀಸರ್ ದಿನೇಶ್ ಎಂ. ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.  ವಾಣಿಜ್ಯಶಾಸ್ತç ಸಹಾಯಕ ಪ್ರಾಧ್ಯಾಪಕರಾದ ಡಾ. ದತ್ತ ಕುಮಾರ್ ಸ್ವಾಗತಿಸಿದರೆ, ಸ್ನಾತಕೋತ್ತರ ವಿಭಾಗದ ಸಹ ಪ್ರಾಧ್ಯಾಪಕ ಉಮೇಶ್ ಪೈ ವಂದನಾರ್ಪಣೆಗೈದರು.  ಕನ್ನಡ ವಿಭಾಗ ಮುಖ್ಯಸ್ಥರಾದ ರತ್ನಮಾಲಾ ಕಾರ್ಯಕ್ರಮ ನಿರೂಪಿಸಿದರು.  


ಪದವಿ ವಿಭಾಗದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಶಾಂತ ಎನ್. ವಾಣಿಜ್ಯಶಾಸ್ತ್ರ ಪದವಿ ವಿಭಾಗದ ಮುಖ್ಯಸ್ಥರಾದ ಬಿಂದು ಟಿ., ಗ್ರಂಥಪಾಲಕರಾದ ಕೃಷ್ಣ, ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರುಖಿಯತ್, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.  ಅಂತಿಮ ಪದವಿ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top