ಉಜಿರೆ: ಶ್ರೀ ಧ. ಮಂ. (ಸ್ವಾಯತ್ತ) ಕಾಲೇಜಿನ ವಾರ್ಷಿಕೋತ್ಸವವು ಮಾ. 21ರಂದು ಸಂಜೆ 5.30ಕ್ಕೆ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NITK) ಸುರತ್ಕಲ್ ಇಲ್ಲಿನ ನಿರ್ದೇಶಕ ಪ್ರೊ. ಬಿ. ರವಿ ಭಾಗವಹಿಸಲಿದ್ದಾರೆ. ಎಸ್ ಡಿ ಎಂ ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್. ಉಪಸ್ಥಿತರಿರಲಿದ್ದಾರೆ.
ಮಾ. 20 ರಂದು ಬೆಳಗ್ಗೆ 9.30 ಕ್ಕೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ‘ಅಚೀವರ್ಸ್ ಡೇ’ ನಡೆಯಲಿದ್ದು, ಕ್ಯೂರಿಯಾಸಿಟಿ ನಾಲೆಜ್ ಸೊಲ್ಯೂಷನ್ಸ್, ಬೆಂಗಳೂರು ಇದರ ಸ್ಥಾಪಕಿ ಮೇಘವಿ ಮಂಜುನಾಥ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ