ಮಾ.12; ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ

Upayuktha
0



ಉಜಿರೆ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ‘ಮಹಿಳೆ ಮತ್ತು ಹೂಡಿಕೆ: ಭವಿಷ್ಯದ ಬೆಳವಣಿಗೆಯ ಸೇತು’ ಕುರಿತ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ ಮಾ. 12ರಂದು ಬೆಳಗ್ಗೆ 10 ಕ್ಕೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ.


ಕಾಲೇಜಿನ ಮಹಿಳಾ ಕುಂದುಕೊರತೆ ನಿವಾರಣಾ ಕೋಶ, ಆಂತರಿಕ ದೂರುಗಳ ಸಮಿತಿ ಮತ್ತು ಮಹಿಳಾ ಅಭಿವೃದ್ಧಿ ಕೋಶದ ವತಿಯಿಂದ ಆಂತರಿಕ ಗುಣಮಟ್ಟ ಖಾತರಿ ಕೋಶ (ಐಕ್ಯುಎಸಿ) ಸಹಯೋಗದೊಂದಿಗೆ ನಡೆಯಲಿರುವ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆ ಉದ್ಘಾಟಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಲಿದ್ದಾರೆ.


ಬೆಂಗಳೂರಿನ ಜನಮನ್ (JANMAN) ಫಾರ್ಮಾಸುಟಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕಿ (Chief Executive Director) ಅನಿಲಾ ದೀಪಕ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.


ಸಂಜೆ 4ಕ್ಕೆ ಸೆಮಿನಾರ್ ಹಾಲ್ ನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ನ್ಯೂಸ್ ಫಸ್ಟ್ ಕನ್ನಡ ಸುದ್ದಿ ವಾಹಿನಿಯ ಆ್ಯಂಕರ್ ಹಾಗೂ ಅಸೋಸಿಯೇಟ್ ಎಡಿಟರ್ ವಿದ್ಯಾಶ್ರೀ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಪರೀಕ್ಷಾಂಗ ಕುಲಸಚಿವೆ ನಂದ ಕುಮಾರಿ ಕೆ.ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಐಕ್ಯುಎಸಿ ಸಂಯೋಜಕ ಗಜಾನನ ಆರ್. ಭಟ್ ಉಪಸ್ಥಿತರಿರಲಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top