ಮಹಿಳಾ ದಿನಾಚರಣೆ: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ನಿಂದ ವಿಶಿಷ್ಟ ಕಾರ್ಯಕ್ರಮ

Upayuktha
0


ಮಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಕಂಪನಿಯು ಇತ್ತೀಚೆಗೆ 2025ರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಎರಡು ವಿಶಿಷ್ಟ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದೆ. ಮಾರ್ಚ್ 12 ಮತ್ತು ಮಾರ್ಚ್ 16ರಂದು ಟಿಕೆಎಂನ ಬಿಡದಿಯ ಉತ್ಪಾದನಾ ಘಟಕದಲ್ಲಿ ನಡೆದ ಈ ಕಾರ್ಯಕ್ರಮಗಳಲ್ಲಿ 700ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಮತ್ತು ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ ಶ್ರೀಮತಿ ಆರ್. ಲತಾ (ಐಎಎಸ್) ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. 


ಈ ಎರಡು ಕಾರ್ಯಕ್ರಮಗಳು ಮಹಿಳಾ ಪ್ರತಿಭೆಗಳನ್ನು ಬೆಳೆಸುವ ಮತ್ತು ಕೆಲಸ ಹಾಗೂ ಬದುಕಿನ ಸಮತೋಲನವನ್ನು ಕಾಪಾಡಿಕೊಳ್ಳಲು ನೆರವಾಗುವ ಟಿಕೆಎಂನ ಪ್ರಯತ್ನಗಳನ್ನು ಪ್ರದರ್ಶಿಸಿದವು. ಮಾರ್ಚ್ 12ರಂದು ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿವಿಧ ಶಿಫ್ಟ್‌ಗಳ 250ಕ್ಕೂ ಹೆಚ್ಚು ಮಹಿಳಾ ತಂಡದ ಸದಸ್ಯರು ಮತ್ತು ಹಿರಿಯ ನಾಯಕರು ಭಾಗವಹಿಸಿದರು.


ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಮತಿ ಆರ್. ಲತಾ (ಐಎಎಸ್) ಅವರು, “ಮಹಿಳೆಯರ ಸಬಲೀಕರಣಗೊಳಿಸುವುದು ಕೇವಲ ಅವಕಾಶಗಳ ಕುರಿತಾದದದ್ದು ಮಾತ್ರವೇ ಅಲ್ಲ, ಬದಲಿದೆ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವುದೂ ಆಗಿದೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯು ಒಳಗೊಳ್ಳುವಿಕೆಯ ಸಂಸ್ಕೃತಿಯನ್ನು ಸೃಷ್ಟಿಸುವ ವಿಚಾರದಲ್ಲಿ ಮುಂಚೂಣಿಯಲ್ಲಿದ್ದು, ಆಟೋಮೋಟಿವ್ ಉದ್ಯಮಕ್ಕೆ ಮಾದರಿಯಾಗಿದೆ ಎಂದು ತಿಳಿದು ನನಗೆ ಸಂತೋಷವಾಗಿದೆ. ಇಂತಹ ಯೋಜನೆಗಳು ಮಹಿಳೆಯರನ್ನು ವೃತ್ತಿಪರವಾಗಿ ಸಶಕ್ತಗೊಳಿಸುವುದರ ಜೊತೆಗೆ ಸಮಾಜಕ್ಕೆ ಸಕಾರಾತ್ಮಕ ಕೊಡುಗೆ ನೀಡುತ್ತವೆ” ಎಂದು ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top