ನವೋದಯ ಸ್ವಸಹಾಯ ಗುಂಪು ರಜತ ಸಂಭ್ರಮ ಮೇ 10ರಂದು

Chandrashekhara Kulamarva
0





ಮಂಗಳೂರು: ನವೋದಯ ಸ್ವಸಹಾಯ ಗುಂಪುಗಳಿಗೆ 25 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ರಜತ ಸಂಭ್ರಮ ಕಾರ್ಯಕ್ರಮ ಮೇ ಹತ್ತರಂದು ನಡೆಯಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಪ್ರಮುಖ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ, ಡಾ.ಡಿ.ವೀರೇಂದ್ರ ಹೆಗ್ಗಡೆ, ಪೇಜಾವರ ಮಠಾಧೀಶರು, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರಾದ ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಲಕ್ಷ್ಮಣ ಸವದಿ, ಜಿ.ಟಿ.ದೇವೇಗೌಡ, ಡಾ.ಉದಯ್ ಶಂಕರ್ ಆವಸ್ತಿ, ಮುರುಗೇಶ್ ನಿರಾಣಿ, ಸುನೀಲ್ ಕುಮಾರ್, ಶಿವರಾಮ್ ಹೆಬ್ಬಾರ್, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.


 ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ 3,000 ಬಸ್‌ಗಳಲ್ಲಿ ಮಹಿಳೆಯರು ನಗರಕ್ಕೆ ಬರಲಿದ್ದು, ಒಂದೂವರೆ ಲಕ್ಷ ಸಂಘದ ಮಹಿಳೆಯರು ಸಮವಸ್ತ್ರದಲ್ಲಿ ಪಾಲ್ಗೊಳ್ಳಲಿದ್ದಾರೆ. ತಿಂಡಿ, ಊಟೋಪಚಾರ ಸೇರಿದಂತೆ ಎಲ್ಲಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದಾಗಿ ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top