ಬೆಂಗಳೂರು: ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟ ದಲ್ಲಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರವು ಕಾರ್ಯಾಚರಣೆಗೆ ಇಳಿದಿದೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.
ದಾಳಿಯಲ್ಲಿ ಸಂತ್ರಸ್ತರಾದವರ ರಕ್ಷಣೆಗೆ ಕರ್ನಾಟಕದಿಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೋಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಕರ್ನಾಟಕದ ಪ್ರವಾಸಿಗರ ಬಗ್ಗೆ ವಿವರಣೆ ನೀಡಿದ್ದಾರೆ.
ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪಹಲ್ಗಾಮ್ ಗೆ ಸಂತೋಷ್ ಲಾಡ್ ತಲುಪಿದ್ದು, ಬೆಳಗ್ಗಿನಿಂದಲೇ ಅವರು ಮೃತದೇಹವನ್ನು ಇರಿಸಿರುವ ಸ್ಥಳಗಳಿಗೆ ತೆರಳಿ ಮೃತದೇಹ ಗುರುತಿಸಲು ಸಂಬಂಧಿಕರಿಗೆ ಸಹಾಯ ಮಾಡುತ್ತಿದ್ದಾರೆ. ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಮಾತನಾಡಿದ ಲಾಡ್ ಅವರು, ರಕ್ಷಣಾ ಕಾರ್ಯದ ಬಗ್ಗೆ ವಿವರಣೆ ನೀಡಿ ಮೃತ ದೇಹಗಳನ್ನು ರಾಜ್ಯಕ್ಕೆ ತರುವ ನಿಟ್ಟಿನಲ್ಲಿ ನೆರವು ಕೋರಿ, ಗಾಯಾಳುಗಳಿಗೂ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ನೆರವನ್ನು ಕೇಳಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ