ಪ್ರವಾಸೋದ್ಯಮ ಇಲಾಖೆ ಗೈಡೆಡ್ ಟೂರ್ನಡಿ ಪ್ರವಾಸಿಗರಿಗೆ ತಲಾ 150ರೂ. ಪ್ರವೇಶ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಲ್ಲಿಸಿದೆ. ವಿಧಾನಸೌಧದ ಗೈಡೆಡ್ ಟೂರ್ಗಾಗಿ ಗೈಡ್ಗೆ ವೇತನ ನೀಡಬೇಕಾಗಿದ್ದು, ಇದೆಲ್ಲದರ ವೆಚ್ಚವನ್ನು ಲೆಕ್ಕಹಾಕಿ 150 ರೂ. ಪ್ರವೇಶ ಶುಲ್ಕ ವಿಧಿಸುವ ಪ್ರಸ್ತಾವನೆಯನ್ನು ಪ್ರವಾಸೋದ್ಯಮ ಇಲಾಖೆ ಮುಂದಿಟ್ಟಿದೆ.
ವಿಧಾನಸೌಧಕ್ಕೆ ಗೈಡೆಡ್ ಟೂರ್ ಜೊತೆಗೆ ಪ್ರವಾಸೋದ್ಯಮ ಇಲಾಖೆ ಸಾಮಾನ್ಯ ಪ್ರವಾಸಿಗರಿಗೆ (ಗೈಡೆಡ್ ಟೂರ್ ಮಾಡದ ವರಿಗೆ) ಉಚಿತ ಪ್ರವೇಶ ನೀಡಲೂ ಚಿಂತನೆ ನಡೆಸಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಪೀಕರ್ ಯು.ಟಿ. ಖಾದರ್ ಪ್ರವಾಸಿಗರಿಗೆ ತಲಾ 150 ರೂ. ನಿಗದಿ ಮಾಡುವ ಪ್ರವಾಸೋದ್ಯಮದ ಪ್ರಸ್ತಾವನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ದುಬಾರಿ ಪ್ರವೇಶ ಶುಲ್ಕ ಪ್ರವಾಸಿಗರಿಗೆ ಹೊರೆ ಬೀಳಲಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ದುಬಾರಿ ಶುಲ್ಕವನ್ನು ಪರಿಷ್ಕರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ