ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ. ಸುನೀಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ಎಲ್.ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ ಹಾಗೂ ಮತ್ತಿತರು ಭಾಗವಹಿಸಲಿದ್ದು, ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಭವ್ಯಾ ನಾಗರಾಜ್ ಉಪನ್ಯಾಸ ನೀಡಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ