ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಎಸ್ಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Chandrashekhara Kulamarva
0

 


ಉಡುಪಿ:
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ  ಪ್ರತಿಷ್ಠಿತ ಶಾಲೆ ಯೋಜನೆಯಡಿ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾವಕಾಶ ಕಲ್ಪಿಸಲು ಪ.ಜಾತಿಯ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್  www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಮೇ 3 ಕೊನೆಯ ದಿನ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದೊಳಗೆ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ. ರಜತಾದ್ರಿ, ಮಣಿಪಾಲ ಇಲ್ಲಿ ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 0820-2574892 ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top