ಖಾಸಗಿ ಶಾಲೆಗಳಲ್ಲಿ ಎಸ್.ಸಿ /ಎಸ್.ಟಿ ವಿದ್ಯಾರ್ಥಿಗಳ ದಾಖಲು: ಅರ್ಜಿ ಆಹ್ವಾನ

Chandrashekhara Kulamarva
0

ಮಂಗಳೂರು: 2025-26ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ಜಾತಿ ಹಾಗೂ  ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರತಿಷ್ಟಿತ ಶಾಲೆಗಳಲ್ಲಿ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೇರ್ಪಡೆಗೊಳಿಸುವ ಪ್ರತಿಷ್ಟಿತ ಶಾಲಾ ವಿವರ :- 1) ಶಾರದಾ ವಿದ್ಯಾಲಯ ಕೊಡಿಯಾಲ್‍ಬೈಲ್ , 2) ಶಾರದಾ ಗಣಪತಿ ವಿದ್ಯಾಕೇಂದ್ರ ಕೈರಂಗಳ ಪುಣ್ಯಕೋಟಿ ನಗರ , 3) ಬಾಲವಿಕಾಸ  ಆಂಗ್ಲ ಮಾಧ್ಯಮ ಶಾಲೆ ಮಾಣಿ,  4) ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲ , 5) ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ , 6)  ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ಉಜಿರೆ , 7) ವಾಣಿ ಇಂಗ್ಲೀಷ್ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಬೆಳ್ತಂಗಡಿ, 8) ಸೆಕ್ರೇಡ್ ಹಾಟ್ಸ್ ಪದವಿ ಪೂರ್ವ ಕಾಲೇಜು ಮಡಂತ್ಯಾರು (ಪ್ರೌಢ ಶಾಲಾ ವಿಭಾಗ) .

ಅರ್ಜಿ ಸಲ್ಲಿಸಲು ಮೇ 3 ಕೊನೆಯ ದಿನ. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಆಯಾಯ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಯ  ಸಹಾಯಕ ನಿರ್ದೇಶಕರ ಕಛೇರಿಗೆ  ಸಲ್ಲಿಸಬಹುದು. ಅರ್ಜಿಗಳನ್ನು ಕಛೇರಿ ವೇಳೆಯಲ್ಲಿ ಆಯಾಯ ಸಹಾಯಕ ನಿರ್ದೇಶಕರ ಕಛೇರಿಯಿಂದ ಸಮಾಜ ಕಲ್ಯಾಣ ಇಲಾಖೆಯಿಂದ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆ, ತಾಲೂಕು ಸಹಾಯಕ ನಿರ್ದೇಶಕರ (ಗ್ರೇಡ್-1)  ಕಚೇರಿ ದೂ.ಸಂ: 9480843114   ಸಂಪರ್ಕಿಸುವಂತೆ  ಸಮಾಜ ಕಲ್ಯಾಣ  ಇಲಾಖೆ ಸಹಾಯಕ ನಿರ್ದೇಶಕರು  (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಂಗಳೂರು, ಏ.22(ಕ.ವಾ):- 2025-26ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ಜಾತಿ ಹಾಗೂ  ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರತಿಷ್ಟಿತ ಶಾಲೆಗಳಲ್ಲಿ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೇರ್ಪಡೆಗೊಳಿಸುವ ಪ್ರತಿಷ್ಟಿತ ಶಾಲಾ ವಿವರ :- 1) ಶಾರದಾ ವಿದ್ಯಾಲಯ ಕೊಡಿಯಾಲ್‍ಬೈಲ್ , 2) ಶಾರದಾ ಗಣಪತಿ ವಿದ್ಯಾಕೇಂದ್ರ ಕೈರಂಗಳ ಪುಣ್ಯಕೋಟಿ ನಗರ , 3) ಬಾಲವಿಕಾಸ  ಆಂಗ್ಲ ಮಾಧ್ಯಮ ಶಾಲೆ ಮಾಣಿ,  4) ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲ , 5) ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ , 6)  ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ಉಜಿರೆ , 7) ವಾಣಿ ಇಂಗ್ಲೀಷ್ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಬೆಳ್ತಂಗಡಿ, 8) ಸೆಕ್ರೇಡ್ ಹಾಟ್ಸ್ ಪದವಿ ಪೂರ್ವ ಕಾಲೇಜು ಮಡಂತ್ಯಾರು (ಪ್ರೌಢ ಶಾಲಾ ವಿಭಾಗ) .

ಅರ್ಜಿ ಸಲ್ಲಿಸಲು ಮೇ 3 ಕೊನೆಯ ದಿನ. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಆಯಾಯ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಯ  ಸಹಾಯಕ ನಿರ್ದೇಶಕರ ಕಛೇರಿಗೆ  ಸಲ್ಲಿಸಬಹುದು. ಅರ್ಜಿಗಳನ್ನು ಕಛೇರಿ ವೇಳೆಯಲ್ಲಿ ಆಯಾಯ ಸಹಾಯಕ ನಿರ್ದೇಶಕರ ಕಛೇರಿಯಿಂದ ಸಮಾಜ ಕಲ್ಯಾಣ ಇಲಾಖೆಯಿಂದ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆ, ತಾಲೂಕು ಸಹಾಯಕ ನಿರ್ದೇಶಕರ (ಗ್ರೇಡ್-1)  ಕಚೇರಿ ದೂ.ಸಂ: 9480843114   ಸಂಪರ್ಕಿಸುವಂತೆ  ಸಮಾಜ ಕಲ್ಯಾಣ  ಇಲಾಖೆ ಸಹಾಯಕ ನಿರ್ದೇಶಕರು  (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

إرسال تعليق

0 تعليقات
إرسال تعليق (0)
To Top