ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೋಷಕರು ವಯೋಮಿತಿ ಗೊಂದಲದಲ್ಲಿ ಇದ್ದಾರೆ. ಎರಡು ತಿಂಗಳು ರಿಯಾಯ್ತಿ ಕೊಡಬಹುದು. ದೇಶದಲ್ಲಿ ಈಗಾಗಲೇ 6 ವರ್ಷ ಇದೆ. ಈ ವರ್ಷ ಮಾತ್ರ ವಯಸ್ಸಿನ ಮಿತಿ ಸಡಿಲ ಮಾಡಲಾಗುವುದು. ಮುಂದಿನ ವರ್ಷದಿಂದ 1ನೇ ತರಗತಿಗೆ ಸೇರಲು 6 ವರ್ಷ ನಿಯಮ ಕಡ್ಡಾಯ ಎಂದು ತಿಳಿಸಿದರು.
ಎಸ್‌ಇಪಿ ಅವರಿಂದ ವರದಿ ಕೇಳಿದ್ದು, ಅವರು ಮೊದಲು 6 ವರ್ಷ ಅಂತ ಹೇಳಿದ್ರು. ಆಮೇಲೆ ನಮ್ಮ ಇಲಾಖೆ ಅವರ ಜೊತೆ ಮಾತಾಡಿದ ಬಳಿಕ ಎಸ್‌ಇಪಿ ನೀಡಿದ ಸೂಚನೆ ಅನ್ವಯ 5 ವರ್ಷ 5 ತಿಂಗಳು ಆಗಿದ್ದರೆ ದಾಖಲಾತಿ ಮಾಡಬೇಕು ಎಂದರು.
ಇದು ರಾಜ್ಯಪಠ್ಯ ಕ್ರಮಕ್ಕೆ ಮಾತ್ರ ಅನ್ವಯ. ಐಸಿಎಸ್‌ಸಿ, ಸಿಬಿಎಸ್‌ಇ ಬೋರ್ಡ್ ಬಗ್ಗೆ ನಾವು ನಿರ್ಧಾರ ಮಾಡಲು ಆಗುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ