ಕಾರ್ಕಳ: ಇಲ್ಲಿನ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಸುರೇಶ್ ರೈ.ಕೆ ಮಾತನಾಡಿ, ಭಾರತ ರತ್ನ ಡಾ.ಬಿ ಆರ್ ಅಂಬೇಡ್ಕರ್ ರವರ ವಿಚಾರಧಾರೆಗಳು ವರ್ತಮಾನ ಮತ್ತು ಭವಿಷ್ಯಕ್ಕೆ ಪ್ರಸ್ತುತವಾಗಿವೆ. ದೇಶ ಕಂಡ ಅಪೂರ್ವ ಮಾನವತಾವಾದಿ ಬಾಬಾ ಸಾಹೇಬರು ಅಲ್ಲದೆ ಭಾರತ ದೇಶದ ಏಕತೆ ಮತ್ತು ಸಮಗ್ರತೆಯ ಬಹು ದೊಡ್ಡ ಪ್ರತಿಪಾದಕರಾಗಿದ್ದ ಅಂಬೇಡ್ಕರ್ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ರಾಜಕೀಯ ಸ್ವಾತಂತ್ರ್ಯ ವನ್ನು ಗಳಿಸುವ ಮೊದಲು ಭಾರತ ಸಾಮಾಜಿಕವಾಗಿ ವಿಮೋಚನೆಯಾಗಬೇಕು ಎಂದು ಆಗ್ರಹಿಸಿದ್ದರು. ಅವರು ಪ್ರತಿಪಾದಿಸಿದ ರಾಷ್ಟ್ರೀಯತೆ ರಾಜಕೀಯ ಸ್ವಾತಂತ್ರ್ಯಕ್ಕಿಂತಲೂ ಹೆಚ್ಚಾಗಿ ಸಾಮಾಜಿಕ ಸ್ವಾತಂತ್ರ್ಯ ಮತ್ತು ಸಹ ಬಾಳ್ವೆಯನ್ನು ಪ್ರತಿಪಾದಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಭಾರತದ ಘನ ಸಂವಿಧಾನದ ಪೀಠಿಕೆಯನ್ನು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಭಾಗ್ಯ ಲಕ್ಷ್ಮಿಯವರು ಬೋಧಿಸಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ಯಾಮ್ ಅವರು ಸಾಂದರ್ಭಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ಚಂದ್ರಾವತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಶ್ರೀಮತಿ ಸೌಮ್ಯ ಎಚ್.ಕೆ ಉಪಸ್ಥಿತರಿದ್ದರು. ಕಾರ್ಯಕ್ರಮವು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವುದರ ಮೂಲಕ ಆರಂಭವಾಯಿತು. ವಿದ್ಯಾರ್ಥಿನಿಯರಾದ ವಿಲಾಸಿನಿ ಕಾರ್ಯಕ್ರಮ ನಿರೂಪಿಸಿದರು. ಅಲ್ಲದೆ ಅಶ್ವಿತಾ ನಾಡ ಗೀತೆ ಹಾಡಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಹಾಗೂ ಬೋಧಕ ಹಾಗೂ ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ