500 ಕೋಟಿ ರೂ. ಕಿಕ್‌ಬ್ಯಾಕ್ ಆರೋಪದಡಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಮನವಿ

Upayuktha
0


ಬೆಂಗಳೂರು: ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.  ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬವರು ಈ ಸಂಬಂಧ ರಾಜ್ಯಪಾಲ ಥಾವರ್​​ಚಂದ್ ಗೆಹ್ಲೋಟ್​​ ಅವರಿಗೆ ಮನವಿ ಮಾಡಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬೇಕು ಎಂದು ಕೋರಿದ್ದಾರೆ.


2015ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ 8 ಗಣಿ ಗುತ್ತಿಗೆಗಳನ್ನು ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿ ದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ನವೀಕರಣ ,  ಸಾಕಷ್ಟು ವರ್ಷಗಳಿಂದ ಬಾಕಿ ಇದ್ದ ಲೈಸೆನ್ಸ್ ನವೀಕರಣ ಮಾಡಲಾಗಿತ್ತು. ಈ ನವೀಕರಣ ಮಾಡಿಕೊಟ್ಟಿದ್ದಕ್ಕೆ  500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ದೂರು ನೀಡಿರುವ ದೂರಿನಲ್ಲಿ ತಿಳಿಸಿದ್ದು, ಇದರಿಂದ ಸರ್ಕಾರಕ್ಕೆ 5000 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಸಿದ್ದರಾಮಯ್ಯ ಅವರನ್ನು ಪ್ರಾಸಿಕ್ಯೂಷನ್ ಗೆ ಒಳಪಡಿಸಲು ಅನುಮತಿ ನೀಡಿ ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ದೂರುದಾರರ ಜೊತೆ ರಾಜ್ಯಪಾಲರು ಚರ್ಚೆ ನಡೆಸಿ ಸಹಿ ಮಾಡಿ ಕಾನೂನು ವಿಭಾಗದ ಅಭಿಪ್ರಾಯಕ್ಕೆ ಕಳುಹಿಸಿದ್ದಾರೆ. ಸಾಲಿಸಿಟರ್ ಜನರಲ್ ಬಳಿ ಚರ್ಚೆ ನಡೆಸಿ ತೀರ್ಮಾನ ಮಾಡುವುದಾಗಿ ರಾಜ್ಯಪಾಲರು ದೂರುದಾರರಿಗೆ ಭರವಸೆ ನೀಡಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top