ಬಳ್ಳಾರಿ: ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷ ಹಾಗೂ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ, ಸೊಂತ ಗಿರಿಧರ್, ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮೀನಾ ಬೇಲಾರನ್ನು ಭೇಟಿ ಮಾಡಿ, ರೈಲು ನಿಲ್ದಾಣದ ಅಭಿವೃದ್ಧಿ ಕಾರ್ಯಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು, ರದ್ದಾದ ರೈಲುಗಳನ್ನು ಪುನಃ ಸ್ಥಾಪಿಸಬೇಕು, ಹೊಸ ರೈಲುಗಳನ್ನು ಪ್ರಾರಂಭಿಸಬೇಕು, ವಂದೇ ಭಾರತ್ ರೈಲು ಪ್ರಾರಂಭಿಸಬೇಕು, ಬುಕಿಂಗ್ ಕಚೇರಿಯ ಕೌಂಟರ್ ಬಳಿಯಿರುವ ರಿಸರ್ವೇಶನ್ ಕೌಂಟರ್‌ಅನ್ನು ಸ್ಥಳಾಂತರಿಸುವುದು ಸೂಕ್ತವಲ್ಲ. ರೈಲ್ವೆ ನಿಲ್ದಾಣದ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ಮಾಡಿ ಮನವಿಯನ್ನು ಸಲ್ಲಿಸಿದರು.
ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದಮೀನಾ ಬೇಲಾರವರು ಮನವಿಯನ್ನು ಸ್ವೀಕರಿಸಿ ಮನವಿಯಲ್ಲಿ ಪ್ರಸ್ತಾಪಿಸಿದ ಕಾಮಗಾರಿಗಳನ್ನು ಪೂರ್ಣಗೊಳಿಸಿಲು ಪ್ರಯತ್ನ ಮಾಡುತ್ತೇನೆ, ಕುಂಭಮೇಳದ ಸಮಯದಲ್ಲಿ ಸ್ಥಗಿತಗೊಂಡಿದ್ದ ರೈಲ್ವೆ ಸಂಖ್ಯೆ 11303 ಮತ್ತು 11304, ಬೆಳಗಾವಿಯಿಂದ ಹೈದರಾಬಾದ್‌ಗೆ ಸಂಚಾರ ಮಾಡುವ ರೈಲ್ವೆಯನ್ನು ಶ್ರೀಘ್ರದಲ್ಲಿ ಪುನಾರ ಆರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.
ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಗೋಪಾಲಕೃಷ್ಣ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ