ಮೇ 2 ರಿಂದ 4 ರ ವರೆಗೆ: ನಿಟಿಲಾಪುರ ಶ್ರೀ ಸದಾಶಿವ ದೇವಸ್ಥಾನದಲ್ಲಿ ಅತಿರುದ್ರ ಮಹಾಯಾಗ

Upayuktha
0


ಬಂಟ್ವಾಳ: ಅತಿರುದ್ರ ಮಹಾಯಾಗ ಸಮಿತಿ ವತಿಯಿಂದ ಮೊಗರ್ನಾಡು ಸಾವಿರ ಸೀಮೆ, ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಮೇ 2 ರಿಂದ ಮೇ 4 ರವರಗೆ ಅತಿರುದ್ರ ಮಹಾಯಾಗ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಅವರು ತಿಳಿಸಿದರು.

ಅವರು ಬಿ.ಸಿ ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರ ನೀಡಿದರು.


ಈ ಯಾಗದ ಅಂಗವಾಗಿ ಚಾಂದ್ರಮಾನ ಯುಗಾದಿಯ ಸಂದರ್ಭದಲ್ಲಿ ದೀಪ ಪ್ರಜ್ವಲಿಸಿ ಪ್ರಾರಂಭವಾದ ರುದ್ರ ಪಾರಾಯಣ ಎ. 29 ರ ವರೆಗೆ 18158 ಆವೃತ್ತಿಯ ಪಾರಾಯಣಗಳು ಪೂರ್ತಿಯಾಗಿದ್ದು, ಯಾಗದ ಸಂದರ್ಭದವರೆಗೆ ಪಾರಾಯಣ ನೇರವೇರಲಿದೆ.


ವಾರಣಾಸಿಯ ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ, ಮಾರ್ಗದರ್ಶನದಲ್ಲಿ ತಂತ್ರಿವರ್ಯರಾದ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ನಾಡಿನ ಸಮಸ್ತ ಸಂಸ್ಥಾನದ‌ ಮಠಾದೀಶರುಗಳ ದಿವ್ಯ ಸಾನಿಧ್ಯ ಹಾಗೂ ಉಪಸ್ಥಿತಿ, ವಿವಿಧ ಪುಣ್ಯ ಕ್ಷೇತ್ರಗಳ ಧರ್ಮಾಧಿಕಾರಿಗಳು, ಧರ್ಮದರ್ಶಿಗಳು, ಧಾರ್ಮಿಕ ಮುಖಂಡರುಗಳ ಸಹಭಾಗಿತ್ವ ಸಾಮಾಜಿಕ ಮುಖಂಡರು ಮತ್ತು ಜನಪ್ರತಿನಿಧಿಗಳು ಸಹಕಾರದಲ್ಲಿ ಲೋಕಲ್ಯಾರ್ಥವಾಗಿ ಅತಿ ರುದ್ರ ಮಹಾಯಾಗ ನಡೆಯಲಿದೆ ಎಂದು ಅವರು ತಿಳಿಸಿದರು.


ಮೇ 2 ರಂದು ಶತರುದ್ರಾಭಿಷೇಕ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೇ.3 ರಂದು ಕ್ಷೇತ್ರಕ್ಕೆ ಕಲ್ಲಡ್ಕ ಪೇಟೆಯಿಂದ ಹಸಿರು ಹೊರೆಕಾಣಿಕೆ ಶೋಭಯಾತ್ರೆ ನಡೆಯಲಿದೆ.


ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೇ 4 ರಂದು ಅತಿರುದ್ರ ಮಹಾಯಾಗ ನಡೆಯಲಿದ್ದು, ಸಂಜೆ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.


ಮೂರು ದಿನಗಳಲ್ಲಿ ಸಾವಿರಾರು ಭಕ್ತರು ಯಾಗದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದರು. ಸಚಿನ್ ರೈ ಮಾಣಿ, ಅಜಿತ್ ಕುಮಾರ್ ಬರಿಮಾರ್, ಗಣೇಶ್ ಶೆಟ್ಟಿ ಗೋಳ್ತಮಜಲು, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top