ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ 5ನೇ ವರ್ಷದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ ಏಪ್ರಿಲ್ 6ರಂದು ಬೆಳಿಗ್ಗೆ 5.30 ಕ್ಕೆ ಏಕಕಾಲದಲ್ಲಿ ಬಿ.ಸಿ ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಮತ್ತು ಗುರುಪುರ ಕೈಕಂಬದಿಂದ ಆರಂಭಗೊಂಡು 9 ಗಂಟೆಗೆ ಪೊಳಲಿಯಲ್ಲಿ ಸಂಗಮವಾಗಲಿದೆ ಎಂದು ವಿಹಿಪ ಬಂಟ್ವಾಳ ಪ್ರಖಂಡ ಅಧ್ಯಕ್ಷ ನ್ಯಾಯವಾದಿ ಪ್ರಸಾದ ಕುಮಾರ್ ರೈ ತಿಳಿಸಿದ್ದಾರೆ.
ಬಂಟ್ವಾಳ ಶ್ರೀ ರಾಜರಾಜೇಶ್ವರಿ ದೇಗುಲವು ಇತಿಹಾಸ ಪ್ರಸಿದ್ಧ ದೇವಾಲಯವಾಗಿದೆ. ಎ ಗ್ರೇಡ್ ಮಾನ್ಯತೆ ಹೊಂದಿದೆ. ವಾರ್ಷಿಕವಾಗಿ ಸುಮಾರು ರೂ.8 ಕೋಟಿಗಳಷ್ಟು ಆದಾಯವಿದೆ. ದೇವಸ್ಥಾನದ ಆದಾಯವು ದೇವಾಲಯದ ಭಕ್ತ ಜನರಿಗೆ ವಿನಿಯೋಗವಾಗಬೇಕು ಎಂಬ ಬೇಡಿಕೆಯ ಮನವಿಯನ್ನು ದೇವಾಲಯದ ಆಡಳಿತ ಮಂಡಳಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.
ದೇವಾಲಯಕ್ಕೆ ಬರುವ ಭಕ್ತರಿಗೆ ಹಿಂದು ಸಂಸ್ಕೃತಿಗೆ ಪೂರಕವಾದ ವಸ್ತ್ರ ಸಂಹಿತೆ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಸುಸಜ್ಜಿತ ಗೋಶಾಲೆ ನಿರ್ಮಾಣ ಮತ್ತು ನಿರ್ವಹಣೆ ಮಾಡಬೇಕು. ಬಾಲಸಂಸ್ಕಾರ ಕೇಂದ್ರ ತೆರೆದು ಧಾರ್ಮಿಕ ಶಿಕ್ಶಣ ನೀಡುವ ವ್ಯವಸ್ಥೆ ಮಾಡಬೇಕು. ಉಚಿತ ಸಾಮೂಹಿಕ ವಿವಾಹ, ಉತ್ಸವಗಳ ಸಂದರ್ಭದಲ್ಲಿ ರಾತ್ರಿ ಭೋಜನ ವ್ಯವಸ್ಥೆ ಮಾಡಬೇಕು. ದೇವಸ್ಥಾನದ ಪರಿಸರದಲ್ಲಿ ವ್ಯಾಪಾರ ಇತ್ಯಾದಿಗಳಿಗೆ ಅನ್ಯಮತೀಯರಿಗೆ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಹಿಪಂ, ಭಜರಂಗದಳ ಪದಾಧಿಕಾರಿಗಳಾದ ಕ. ಕೃಷ್ಣಪ್ಪ, ಭರತ್ ಕುಮ್ಡೇಲು, ರಾಜೇಶ ಗಂಜಿಮಠ, ಸಂತೋಷ ಸರಪಾಡಿ, ಕೇಶವ ದೈಪಲ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ