ಬಂಟ್ವಾಳ: ಅಯ್ಯಪ್ಪ ವ್ರತಧಾರಿಯಾಗಿ ಸ್ನೇಹಿತರ ಜೊತೆಗೆ ಶಬರಿಮಲೆ ಯಾತ್ರೆಗೆ ತೆರಳಿದ್ದ ಮುಖ್ಯ ಶಿಕ್ಷಕರೋರ್ವರು ಪಂಬ ಸನ್ನಿಧಿಯಲ್ಲಿ ಕುಸಿದು ಇಹಲೋಕ ತ್ಯಜಿಸಿದರು.
ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೋಡಿ ಎಂಬಲ್ಲಿ ಮುಖ್ಯ ಶಿಕ್ಷಕರಾಗಿದ್ದ ಉಮರಗಿ ಶರಣಪ್ಪ (57)ಅವರು ಅಯ್ಯಪ್ಪ ವ್ರತಧಾರಿಗಳ ಗುಂಪಿನಲ್ಲಿ ಬುಧವಾರ ಮುಂಜಾನೆ ಸುಮಾರು 6.30ರ ಹೊತ್ತಿಗೆ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಕುಸಿದು ಬಿದ್ದಿದ್ದರು. ತಕ್ಷಣ ಜೊತೆಗಿದ್ದವರು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ಆಸ್ಪತ್ರೆಗೆ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತಾದರೂ ಬಳಿಕ ಹೃದಯ ಸ್ಥಂಭನಗೊಂಡು ನಿಧನರಾದರು.
ಮೂಲತಃ ಕರ್ನಾಟಕ- ಮಹಾರಾಷ್ಟ್ರ ಗಡಿಪ್ರದೇಶದ ಸೋಲಾಪುರ ನಿವಾಸಿಯಾಗಿದ್ದು ಕಳೆದ 28 ವರ್ಷಗಳಿಂದ ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ ವಾಸವಾಗಿದ್ದರು.
ಬಿ.ಸಿ ರೋಡಿನ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ಸ್ಕೌಟ್ಸ್ ಗೈಡ್ಸ್ ಸಂಘಟನೆಯಲ್ಲಿ ಮಾಣಿ ವಲಯ ಕಾರ್ಯದರ್ಶಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿ, ಸೊಸೆಯಂದಿರನ್ನು ಅಗಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ