ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಬಸ್ರೂರು ರಾಜೀವ್ ಶೆಟ್ಟಿ ಆಯ್ಕೆ

Upayuktha
0


ಉಡುಪಿ:
ಜಿಲ್ಲಾ ರೆಡ್‌ಕ್ರಾಸ್ ಘಟಕದ ಸಭಾಪತಿಗಳಾಗಿದ್ದ ಬಸ್ರೂರು ರಾಜೀವ್ ಶೆಟ್ಟಿಯವರು ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಆಯ್ಕೆಯಾಗಿರುತ್ತಾರೆ.

ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಚುನಾವಣೆ ನಡೆದಿದ್ದು,  ಕರ್ನಾಟಕ ಸರಕಾರದ ಹಣಕಾಸು ಕಾರ್ಯದರ್ಶಿಗಳಾದ ಡಾ. ವಿಶಾಲ್ ಆರ್. ಅವರನ್ನು ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಕರ್ನಾಟಕದ ರಾಜ್ಯಪಾಲರು ಚುನಾವಣಾಧಿಕಾರಿಯಾಗಿ ನೇಮಕ ಮಾಡಿದ್ದರು.

ಚುನಾವಣೆಯಲ್ಲಿ 30 ಜಿಲ್ಲೆಗಳನ್ನು ಪ್ರತಿನಿಧಿಸುವ ಪ್ರತಿನಿಧಿಗಳು ಭಾಗವಹಿಸಿದ್ದು, ಅಂತಿಮವಾಗಿ ಬಸ್ರೂರು ರಾಜೀವ್ ಶೆಟ್ಟಿ ಯವರು ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಆಯ್ಕೆಯಾದರು. ಚುನಾವಣಾಧಿಕಾರಿ ಡಾ. ವಿಶಾಲ್ ಅವರು ರಾಜೀವ್ ಶೆಟ್ಟಿಯವರಿಗೆ ಪ್ರಮಾಣ ಪತ್ರ ನೀಡಿದರು. ಇದೇ ಸಂದರ್ಭದಲ್ಲಿ ಕೊಪ್ಪಳ ಘಟಕದ ಡಾ. ಶ್ರೀನಿವಾಸ ಹ್ಯಾಟಿಯವರನ್ನು ಉಪಸಭಾಪತಿಗಳಾಗಿ ಆಯ್ಕೆ ಮಾಡಲಾಯಿತು.

ರಾಜೀವ್ ಶೆಟ್ಟಿಯವರು ಈ ಹಿಂದೆ ಎರಡು ಬಾರಿ ರಾಜ್ಯ ಸಭಾಪತಿಯಾಗಿ ಕಾರ್ಯ ನಿರ್ವಹಿಸಿದ್ದರು. ಲಯನ್ಸ್‌ ಜಿಲ್ಲಾ ಗವರ್ನರ್‌ರಾಗಿ,ಕೇಂದ್ರ ಸರಕಾರದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಒಂಬುಡ್ಸ್‌ಮನ್‌ ಆಗಿ ಸೇವೆ ಸಲ್ಲಿಸಿದ್ದಾರೆ. ವಿಕಲಚೇತನ ರಾಷ್ಟ್ರೀಯ ಸಂಘಟನೆಯ ಅಧ್ಯಕ್ಷರಾಗಿಯೂ ಈಗ ಕಾರ್ಯ ನಿರ್ವಹಿಸುತ್ತಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top