ಬಳ್ಳಾರಿ; ಮಿಷನ್ ಶಕ್ತಿ' ಅಧಿಕಾರಿಗಳು ಬಿಡಿಸಿಸಿಐಗೆ ಭೇಟಿ

Upayuktha
0



ಬಳ್ಳಾರಿ: ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಆಂತರಿಕ ಸಮಿತಿ ರಚನೆ ಮಾಡುವ ಕುರಿತು ಜಾಗೃತಿ ಮೂಡಿಸುವ `ಮಿಷನ್ ಶಕ್ತಿ' ಯೋಜನೆಯ ಅಧಿಕಾರಿಗಳು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗೆ ಶನಿವಾರ ಭೇಟಿ ನೀಡಿ, ಈ ಕುರಿತು ಮಾಹಿತಿ ನೀಡಿದ್ದಾರೆ.


`ಮಿಷನ್ ಶಕ್ತಿ' ಯೋಜನೆಯ ಕೋ ಆರ್ಡಿನೇಟರ್ ಶಹಜಾನ್ ಮತ್ತು ಸಹಾಯಕಿ ಎನ್.ಕೆ. ಅರ್ಚನ ಅವರು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗೆ ಭೇಟಿ ನೀಡಿ, ಸರ್ವೋಚ್ಛ ನ್ಯಾಯಾಲಯ, ರಾಷ್ಟ್ರೀಯ ಮಹಿಳಾ ಆಯೋಗ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶಗಳ ಪ್ರಕಾರ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ತಡೆಗಟ್ಟಲು, ನಿವಾರಿಸಲು ಅಥವಾ ನಿಷೇಧಿಸುವ ನಿಟ್ಟಿನಲ್ಲಿ ಆಂತರಿಕ ದೂರು ಸಮಿತಿಗಳನ್ನು ರಚನೆ ಮಾಡಿ, ಆ ಮಾಹಿತಿಯನ್ನು ಕರ್ನಾಟಕ ಮಹಿಳಾ ಆಯೋಗದ ಗೂಗುಲ್ ಸ್ಪೆಡ್‌ಶೀಟ್‌ನಲ್ಲಿ ಹಾಗೂ `ಶಿ-ಬಾಕ್ಸ್ ಪೋರ್ಟಲ್'ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಅವರು ಹೇಳಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಈ ಯೋಜನೆಯ ಮೇಲುಸ್ತುವಾರಿವಹಿಸಿದ್ದು, ಆಂತರಿಕ ಸಮಿತಿ ರಚನೆ ಕಡ್ಢಾಯವಾಗಿದೆ ಎಂದು ಅವರು ವಿವರಿಸಿದರು.


ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮತ್ತು ಜಂಟಿ ಕಾರ್ಯದರ್ಶಿ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ ಅವರು `ಮಿಷನ್ ಶಕ್ತಿ' ಯೋಜನೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಈ ಕುರಿತು ಜಿಲ್ಲೆಯ ಕೈಗಾರಿಕೆಗಳು, ಉದ್ಯಮಿಗಳಿಗೆ ಈ ಮಾಹಿತಿ ನೀಡಿ ಜಾಗೃತಿ ಮೂಡಿಸುವುದಾಗಿ ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top