ಏಪ್ರಿಲ್‌ 15ರಿಂದ 17 ವರೆಗೆ ಸಿಇಟಿ ಪರೀಕ್ಷೆ

Upayuktha
0

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 15ರಿಂದ 17ವರೆಗೆ ನಡೆಯಲಿದೆ. ಏಪ್ರಿಲ್ 18 ಕ್ಕೆ ನಿಗದಿಯಾಗಿದ್ದ ಕನ್ನಡ ಭಾಷೆ ಪರೀಕ್ಷೆಯನ್ನು ಗುಡ್ ಫ್ರೈಡೇ ಹಿನ್ನೆಲೆ ಏಪ್ರಿಲ್ 15ಕ್ಕೆ ಪ್ರೀಪೋನ್‌ ಮಾಡಲಾಗಿದೆ. 

ಸಿಇಟಿ ಪರೀಕ್ಷೆಗೆ ಜನವರಿ 23 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಈ ವರ್ಷ 3 ಲಕ್ಷ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುವ ನೀರಿಕ್ಷೆಯಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಏಪ್ರಿಲ್ 15ರಂದು ಕನ್ನಡ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ನಡೆಯಲಿದೆ. 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು ,ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಮತ್ತು ಕೆಇಎ ನಡೆಸಿದ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ವಿನಾಯಿತಿ ಇರುತ್ತದೆ. 

ಏಪ್ರಿಲ್ 16 ರಂದು 10:30 ರಿಂದ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2:30 ರಿಂದ ರಾಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಮರುದಿನ ಅಂದರೆ ಏಪ್ರಿಲ್ 17 ರಂದು ಬೆಳಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top