ಮಂಗಳೂರು: ಸಿಎಂ ಗೋಲ್ಡ್ ಮೆಡಲ್ ವಿನ್ನರ್ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಕೃಷ್ಣ ನಾಯಕ್ ವಿರುದ್ಧ ಆರೋಪಿಯ ಮೈಮೇಲಿದ್ದ 50 ಗ್ರಾಮ್ ಚಿನ್ನ ಎಗರಿಸಿದ ಆರೋಪ ಕೇಳಿ ಬಂದಿದೆ.
ಮಂಗಳೂರು ಮಹಿಳಾ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ನಾಯಕ್ ಪ್ರಕರಣ ಮುಚ್ಚಿ ಹಾಕಲು 3 ಲಕ್ಷ ರೂಪಾಯಿ ಲಂಚದ ಜೊತೆ ಆರೋಪಿಯ ಮೈಮೇಲಿದ್ದ 50 ಗ್ರಾಮ್ ಚಿನ್ನ ಪಡೆದಿರುವುದಾಗಿ ಆರೋಪಿಸಿ ಎಸಿಪಿಗೆ ದೂರು ಸಲ್ಲಿಕೆಯಾಗಿದೆ.
ಮಾರ್ಚ್ 13ರಂದು ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಬೆಳ್ತಂಗಡಿ ಮೂಲದ ಯುವಕನ ತಾಯಿ ಇನ್ಸ್‌ಪೆಕ್ಟರ್ ಬಾಲಕೃಷ್ಣ ವಿರುದ್ಧ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ನಾಯಕ್ ಅವರಿಗೆ ದೂರು ನೀಡಿದ್ದಾರೆ. ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ನೆಂದು ಎಂದು ನನ್ನ ಮಗನನ್ನು ಉಳ್ಳಾಲ ಪೊಲೀಸರು 2024ರ ಜೂನ್ 28ರಂದು ವಶಕ್ಕೆ ಪಡೆದಿದ್ದರು. ಕಳವಾದ ಚಿನ್ನದ ರಿಕವರಿ ಆಗಬೇಕಿದೆ ಎಂದು ಹೇಳಿದ ಇನ್ಸ್‌ಪೆಕ್ಟರ್, ಪ್ರಕರಣ ಮುಚ್ಚಿ ಹಾಕಲು 3 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಜು. 1ರಂದು ಠಾಣೆಯಲ್ಲೇ ಅವರಿಗೆ ಹಣ ನೀಡಿದ್ದೇನೆ. ಹಣ ಪಡೆದರೂ ಮಗನನ್ನು ಆರೋಪಿಯಾಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಮಗ ಧರಿಸಿದ್ದ ಬಂಗಾರದ ಸರ, ಬ್ರಾಸ್ಲೇಟ್, ಕಡಗ, ಮೂರು ಉಂಗುರ, ಒಂದು ಓಲೆ ಸೇರಿ ಒಟ್ಟು 50 ಗ್ರಾಮ್ ಚಿನ್ನಾಭರಣ ಕಿತ್ತುಕೊಂಡಿದ್ದರು. ಇದರ ಲೆಕ್ಕವನ್ನು ಚಾರ್ಜ್ ಶೀಟ್‌ನಲ್ಲಿ ಹಾಕುತ್ತೇನೆ, ಆಮೇಲೆ ರಿಕವರಿ ಮಾಡಿಕೊಳ್ಳಬಹುದು ಎಂದಿದ್ದರು.
ಆದರೆ ಈಗ ಕೋರ್ಟಿಗೆ ಸಲ್ಲಿಸಿರುವ ಚಾರ್ಜ್ ಶೀಟಿನಲ್ಲಿ ಈ ಚಿನ್ನಾಭರಣದ ಬಗ್ಗೆ ಉಲ್ಲೇಖಿಸಿಲ್ಲ. ಖಾಲಿ ಕಾಗದಗಳಿಗೆ ಸಹಿ ಮಾಡಿಸಿದ್ದಾರೆ. ಆರೋಪಿ ಇನ್‌ಸ್ಪೆಕರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಯಿ ಲಿಖಿತ ದೂರಿನಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ