ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Upayuktha
0


ಉಡುಪಿ:
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯೂಎಸಿ., ಪ್ಲೇಸ್ಮೆಂಟ್ ಸೆಲ್ ಹಾಗೂ ಟೈಮ್  ಇನ್ಸ್ಟಿಟ್ಯೂಟ್‌ ಉಡುಪಿ  ಸಹಯೋಗದೊಂದಿಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಮಾಹಿತಿ ಕಾರ್ಯಗಾರವು ನಡೆಯಿತು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಿತ್ಯಾನಂದ ವಿ. ಗಾಂವಕರ, ಅವರು ವಿದ್ಯಾರ್ಥಿಗಳಿಗೆ ಪಠ್ಯ, ಸಹಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಅವಕಾಶ ಕಲ್ಪಿಸಿ ಕೊಡುವ ಮೂಲಕ ಕಡಿಮೆ ವೆಚ್ಚದ ಶಿಕ್ಷಣದೊಂದಿಗೆ ವೃತ್ತಿಪರ ಹಾಗೂ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿ ಹೆಚ್ಚಿನ ಆದ್ಯತೆಯನ್ನು ಸಂಸ್ಥೆಯಲ್ಲಿ ನೀಡಲಾಗುತ್ತದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನ ಅವಶ್ಯಕತೆಗಳಿಗೆ ಅನುಗುಣವಾಗಿ ಪ್ಲೇಸ್ಮೆಂಟ್ ಸೆಲ್ ನಿರಂತರವಾಗಿ ವೃತ್ತಿ ಮಾರ್ಗದರ್ಶನ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ತರಬೇತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ.ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

ಪ್ರತಿಷ್ಠಿತ ಕೋಚಿಂಗ್ ಸೆಂಟರ್ ಟೈಮ್  ಇನ್ಸ್ಟಿಟ್ಯೂಟ್‌, ಮಂಗಳೂರು ಬ್ರಾಂಚ್‌ನ ಮಾರ್ಕೆಟಿಂಗ್ ಮ್ಯಾನೇಜರ್ ಆಶಿತ್ ಪೂಜಾರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.

ಪದವಿ ನಂತರ ಮುಂದೇನು? ಸರಕಾರಿ ಮತ್ತು ಖಾಸಗಿ  ವಲಯದ ಉದ್ಯೋಗಾವಕಾಶಗಳು, ಪಿಜಿಸಿಇಟಿ, ಕ್ಯಾಟ್, ಜಿ-ಮ್ಯಾಟ್, ಮ್ಯಾಟ್, ಸ್ನಾಪ್ಸ್ ಪರೀಕ್ಷೆಗಳು, ಎಲ್‌ಐಸಿ, ಇಎಸ್‌ಐ, ರೈಲ್ವೇ, ಪೋಸ್ಟಲ್, ಸ್ಟಾಪ್ ಸಿಲೆಕ್ಷನ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳು ಬ್ಯಾಂಕಿಂಗ್‌ ಪರೀಕ್ಷೆಗಳಾದ ಐಬಿಪಿಎಸ್ ಕ್ಲರಿಕಲ್, ಪ್ರೊಬೇಶನರಿ ಆಫೀಸರ್, ಎಸ್.ಒ., ಎಸ್.ಬಿ.ಐ. ಕ್ಲರಿಕಲ್, ಪ್ರೊಬೇಶನರಿ ಆಫೀಸರ್, ಆರ್.ಬಿ.ಐ. ಗ್ರೇಡ್-ಬಿ, ಆರ್.ಬಿ.ಐ. ಅಸಿಸ್ಟೆಂಟ್, ಸಿಎಐಐಬಿ ಪರೀಕ್ಷೆಗಳ ಪೂರ್ವತಯಾರಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕಂಪನಿ ಉದ್ಯೋಗಗಳಾದ ಕ್ಲರಿಕಲ್, ಜೂನಿಯರ್ ಗ್ರೇಡ್, ಸೀನಿಯರ್ ಗ್ರೇಡ್ ಮತ್ತು ಟಾಪ್ ಮ್ಯಾನೇಜ್ಮೆಂಟ್ ಗ್ರೇಡ್ ಹುದ್ದೆಗಳನ್ನು ಪಡೆಯಲು ಅರ್ಹತೆ ಅನುಭವಗಳ ಬಗ್ಗೆಯೂ ಮಾರ್ಗದರ್ಶನ ನೀಡಿದರು. 

ಅಂತಿಮ ಪದವಿ ವಿಭಾಗದ ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎ.,ಬಿ.ಎಸ್.ಡಬ್ಲ್ಯೂ ಹಾಗೂ ಬಿ.ಎಸ್ಸಿ. ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಪದವಿ ವಿಭಾಗದ ಪ್ಲೇಸ್ಮೆಂಟ್ ಆಫೀಸರ್ ಶ್ರೀ ದಿನೇಶ್ ಎಂ. ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಸಂಘಟಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಮೇವಿ ಮಿರಾಂದ, ಪದವಿ ವಿಭಾಗದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ಪ್ರಶಾಂತ ಎನ್., ಸಹ ಪ್ರಾಧ್ಯಾಪಕ ಶ್ರೀ ಉಮೇಶ್ ಪೈ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ರುತಿಕಾ ಸ್ವಾಗತಿಸಿ, ವಿನಿಶಾ ವಂದಿಸಿದರು. ಶರಣ್ಯ ಕಾರ್ಯಕ್ರಮ ನಿರೂಪಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top