ಜಾತಿಗಣತಿ ವರದಿ-2015 ನಾಳೆ ಸಿಎಂ ಮಂಡನೆ

Chandrashekhara Kulamarva
0



ಬೆಂಗಳೂರು: ಜಾತಿಗಣತಿ ವರದಿ-2015 (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ನಾಳೆ (ಶುಕ್ರವಾರ) ಸಚಿವ ಸಂಪುಟ ಸಭೆ ಯಲ್ಲಿ ಮಂಡನೆಯಾಗಲಿದ್ದು, ದತ್ತಾಂಶಗಳ ಅಧ್ಯಯನ ವರದಿ ಪರಿಶೀಲನೆ ಬಳಿಕ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ತಿಳಿಯಲಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 169 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿದ್ದು, ವರದಿಯಲ್ಲಿನ ಅಂಶಗಳ ಬಗ್ಗೆ, ದತ್ತಾಂಶಗಳನ್ನು ಅಧ್ಯಯನ ನಡೆಸಲು ಪ್ರತ್ಯೇಕ ಸಮಿತಿ ರಚಿಸಬೇಕೇ ಅಥವಾ ನೇರವಾಗಿ ಅನುಷ್ಠಾನ ಮಾಡಬೇಕೇ ಎಂಬ ಕುರಿತು ಸದಸ್ಯರೊಂದಿಗೆ ಚರ್ಚೆ ನಡೆಯಲಿದೆ.  


ಆಯೋಗದ ವರದಿಯಾಗಿರುವುದರಿಂದ ಸದನದಲ್ಲಿ ಮಂಡಿಸುವ ಅಗತ್ಯವಿಲ್ಲ ಎಂಬ ನಿರ್ಧಾರಕ್ಕೆ ಬಂದರೆ ಸಚಿವ ಸಂಪುಟ ಸಭೆಯಲ್ಲೇ ಅನುಷ್ಠಾನದ ಅಂತಿಮ ತೀರ್ಮಾನಗೊಳ್ಳಬಹುದು. ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದಿಂದ ವರದಿ ಅನು ಷ್ಠಾನಕ್ಕೆ ವಿರೋಧ ವ್ಯಕ್ತವಾಗಿರುವುದರಿಂದ ಸರ್ಕಾರ ಯಾವ ನಡೆ ಅನುಸರಿಸಲಿದೆ ಎಂಬುದು ಕೂಡ ಕುತೂಹಲ ಹುಟ್ಟಿಸಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top