ಮಂಗಳೂರು: ವೆಲ್ಫೇರ್ ಏಸೋಸಿಯೇಷನ್ ರಾಣಿಪುರ ಇವರ ಮುಂದಾಳತ್ವದಲ್ಲಿ, ಫಾದರ್ ಮುಲ್ಲರ್ ಹೋಮಿಯೋಪತಿ ಮೈದಾನ ದೇರಳಕಟ್ಟೆ ಇಲ್ಲಿ ನಡೆದ ಇಂಟರ್ ಪ್ಯಾರಿಷ್ ಚ್ಯಾರಿಟಿ ಟ್ರೋಫಿ ಕ್ರಿಕೆಟ್ ಪಂದ್ಯಾಟಗಳಲ್ಲಿ ಸೇಂಟ್ ಲೋಯೋಲಾ ಚರ್ಚ್ ಪಾಲಡ್ಕ ವಿನ್ನರ್ ಆಗಿದ್ದು, ಸೇಂಟ್ ಸೆಬೆಸ್ಟಿಯನ್ ಚರ್ಚ್ ಪೆರ್ಮನೂರ್ ರನ್ನರ್ ಪಟ್ಟವನ್ನು ಅಲಂಕರಿಸಿದೆ.
ಏಪ್ರಿಲ್ 5 ಮತ್ತು 6 ರಂದು ಎರಡು ದಿನಗಳ ಕಾಲ ಕ್ರಿಕೆಟ್ ಪಂದ್ಯಾಟವು ನಡೆಯಿತು, ಬಡಬಗ್ಗರ ದೀನ ದಲಿತರಿಗೆ ಹಾಗೂ ವಿವಿಧ ರೋಗಗಳಿಂದ ಬಳಲುವ ಬಡ ರೋಗಿಗಳಿಗೆ ಸಹಾಯ ಹಸ್ತವನ್ನು ನೀಡುವ ಉದ್ದೇಶದಿಂದ ರಾಣಿಪುರ ವೆಲ್ಪೇರ್ ಏಸೋಸಿಯೇಷನ್ ಈ ಚಾರಿಟಿ ಟ್ರೋಫಿ ಪಂದ್ಯಾಟವನ್ನು ಆಯೋಜಿಸಿತ್ತು. ತಾ 5 ರಂದು ಬೆಳಿಗ್ಗೆ ಫಾದರ್ ಪಾವೊಸ್ತಿನ್ ಲೂಕಸ್ ಲೋಬೊ ಆಡಳಿತ ಅಧಿಕಾರಿ ಫಾ ಮುಲ್ಲರ್ ಹೋಮಿಯೋಪತಿ, ಇವರು ಕ್ರಿಕೆಟ್ ಪಂದ್ಯಾಟವನ್ನು ಉದ್ಗಾಟಿಸಿ ಶುಭ ಹಾರೈಸಿದರು.
ಈ ಸಂಧರ್ಭದಲ್ಲಿ ಸ್ಥಾಪಕ ಅಧ್ಯಕ್ಷರಾದ ಜೋಸೆಫ್ ಪಾವ್ಲ್ ಲೋಬೋ ಇವರು ಉಪಸ್ಥಿತರಿದ್ದರು. ಎರಡು ದಿನಗಳ ಕಾಲ ಸುಸೂತ್ರವಾಗಿ ಹಾಗೂ ಬಹಳ ಅಚ್ಚು ಕಟ್ಟಾಗಿ ನಡೆದ ಪಂದ್ಯಾಟಗಳು ತಾ 6.ರಂದು ಸಂಜೆ ಮೂಡಬಿದ್ರೆಯ ಪಾಲಡ್ಕ ತಂಡ ಹಾಗೂ ಪೆರ್ಮನೂರಿನ ಸೆಬಾಸ್ಟಿಯನ್ ತಂಡವು ಫೈನಲ್ ಸೆಣಾಸಾಟ ನಡೆಸಿ ಪಾಲಡ್ಕ ತಂಡ ವಿಜಯಿಯಾಯಿತು.
ವೆಲ್ಫೇರ್ ಎಸೋಸಿಯೇಷನ್ ಅಧ್ಯಕ್ಷರಾದ ಫೆಲಿಕ್ಷ್ ಮೊಂತೇರೋ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಮುಖ್ಯ ಅಥಿತಿಗಳಾಗಿ, ಸಾಹಿತಿ ಹಾಗೂ ಪೋಕಸ್ ಇಂಡಿಯಾ ಸಂಘಟನೆಯ ಅಧ್ಯಕ್ಷ ಯುವ ನಾಯಕ ವಿನೋದ್ ಪಿಂಟೋ ತಾಕೋಡೆ, ರೂಪೇಶ್ ನಿಲಿಮಾ ದಂಪತಿಗಳು ರಾಣಿಪುರ, ಶ್ರೀಮತಿ ಗ್ರೇಸಿ ಮೊಂತೇರೊ ರಾಣಿಪುರ, ಚಾರಿಟಿ ಟ್ರೋಫಿ ಸಂಚಾಲಕರಾದ ಜೀವನ್ ಪೆರಾವೊ, ಕೋಶಾಧಿಕಾರಿ ಟೈಟಸ್ ಡಿಸೋಜ ಕಾರ್ಯದರ್ಶಿ ಆಲ್ವಿನ್ ಡಿಸೋಜ ಇವರೆಲ್ಲರು ವೇದಿಕೆಯಲ್ಲಿದ್ದರು.
ಅಧ್ಯಕ್ಷ ಫೆಲಿಕ್ಸ್ ಮೊಂತೇರೋ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸುಮಾರು 20 ಬಡ ರೋಗಿಗಳಿಗೆ ಹಾಗೂ ಅಶಕ್ತರಿಗೆ ಸಹಾಯ ಹಸ್ತವನ್ನು ಚೆಕ್ ಗಳ ಮುಕಾಂತರ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡಿದ ಶ್ರೀ ವಿನೋದ್ ಪಿಂಟೋ ತಾಕೋಡೆಯವರು, ಕ್ರಿಶ್ಚಿಯಿನ್ನರ ಈ ತಪಸ್ಸು ಕಾಲದಲ್ಲಿ ಬಡವರಿಗೆ ದೀನದಲಿತರಿಗೆ ಸಹಾಯ ಮಾಡಿ ಅವರಲ್ಲಿ ದೇವರನ್ನು ಕಾಣುವ ರಾಣಿಪುರ ವೆಲ್ಫೇರ್ ಸಂಘಟನೆಯ ಕಾರ್ಯವನ್ನು ಶ್ಲಾಗಿಸಿದರು ಇಂಥಹ ಸಂಘಟನೆಗಳು ಉತ್ತಮ ಹಾಗೂ ಆರೋಗ್ಯಕರ ಸಮಾಜವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದರು.
ಇಂತಹ ಪಂದ್ಯಾಟಗಳು ಹಾಗೂ ಚಾರಿಟಿ ವರ್ಕ್ ಮುಂದಿನ ವರುಷಗಳಲ್ಲಿ ಇನ್ನು ದೊಡ್ಡ ಮಟ್ಟದಲ್ಲಿ ನಡೆಯುವಂತಾಗಲಿ ಎಂದು ಶುಭ ಹಾರೈಸಿದರು ಕಾರ್ಯದರ್ಶಿ ಆಲ್ವಿನ್ ಡಿಸೋಜ ವಂದಿಸಿದರು. ಡೆಲನ್ ಲೋಬೋ ಕಾರ್ಯಕ್ರಮ ನಿರೂಪಿಸಿದರು.
ಗೆದ್ದ ತಂಡಗಳ ವಿವರ
ವಿನ್ನರ್
ಸೈಂಟ್ ಲೋಯೋಲಾ ಚರ್ಚ್ ಪಾಲಡ್ಕ
ಟ್ರೋಫಿ ಹಾಗೂ 30 ಸಾವಿರ ನಗದು
ರನ್ನರ್
ಸೇಂಟ್ ಸೆಬೇಸ್ಟಿಯನ್ ಚರ್ಚ್ ಪೆರ್ಮನೂರ್
ಟ್ರೋಫಿ ಹಾಗೂ 20 ಸಾವಿರ ನಗದು
ತೃತೀಯ
MYC ಮರೀಲ್ ಹಾಗೂ ಪೆರ್ಮನೂರ್ ಸ್ಟೋರ್ಟ್ಸ್ ಕ್ಲಬ್
ವೈಯುಕ್ತಿಕ ಬಹುಮಾನಗಳು
ಮ್ಯಾನ್ ಆಪ್ ದಿ ಮ್ಯಾಚ್ : ನಿತಿನ್ ಪಾಲಡ್ಕ
ಮ್ಯಾನ್ ಆಫ್ ಧಿ ಸೀರಿಸ್ ಮತ್ತು ಬೆಸ್ಟ್ ಬ್ಯಾಟ್ಸ್ಮನ್: ಗ್ಲೆನ್ ಸನ್ ಪಾಲಡ್ಕ
ಬೆಸ್ಟ್ ಬೌಲರ್: ಕೊನ್ವೆಲ್ ಪೆರ್ಮನೂರ್
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ