ಈ ಭಾನುವಾರದಂದು ನಡೆದ ಶ್ರೀಹರಿ ಭಜನೆ ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳಾದ ಕು|| ಧೃತಿ ಆತ್ರೇಯಸ್ ಮತ್ತು ಕು|| ಧನ್ವಿ ಆತ್ರೇಯಸ್ ವಿಶೇಷವಾಗಿ ಶ್ರೀ ಗುರುರಾಯರ ಸನ್ನಿಧಿಯಲ್ಲಿ "ನರ್ತನ ಸೇವೆ"ಯನ್ನು ಸಲ್ಲಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದಿಂದ್ರಾಚಾರ್ಯರು ಮಾತನಾಡಿ, ಇಂದಿನ ಮಕ್ಕಳಿಗೆ ಸಂಸ್ಕಾರವೇ ಮುಖ್ಯ. ಆ ಸಂಸ್ಕಾರದಿಂದಲೇ ಮಕ್ಕಳಿಗೆ ಶ್ರೇಯೋಭಿವೃದ್ಧಿ ಆಗಲಿದೆ ಎಂದು ಹೇಳಿ, ಆಶೀರ್ವದಿಸುತ್ತ ಫಲ ಮಂತ್ರಾಕ್ಷತೆ ಕೊಟ್ಟು ಅನುಗ್ರಹಿಸಿದರು. ಭಕ್ತರು ಮಕ್ಕಳ ನರ್ತನ ಸೇವೆಯನ್ನು ವೀಕ್ಷಿಸಿ ಸಂತೋಷವನ್ನು ವ್ಯಕ್ತಪಡಿಸುತ್ತಾ ಪ್ರೋತ್ಸಾಹಿಸಿ ಹಾರೈಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ