ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡಿನ ಕಲಾಕುಂಚ ಶಾಖೆಯ ಆಶ್ರಯದಲ್ಲಿ ಏಪ್ರಿಲ್ 24 ರಂದು ಬೆಳಿಗ್ಗೆ 10 ಗಂಟೆಯಿಂದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿಯ ವರಾಹ ಭಜನಾ ಮಂದಿರದ ಸಭಾಂಗಣದಲ್ಲಿ ಹಿರಿಯರಿಗೆ- ಕಿರಿಯರಿಗೆ ಉಚಿತವಾಗಿ ಸುಗಮ ಸಂಗೀತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಪುತ್ತೂರಿನ ಉದಯಗಾನ ಸಂಗೀತ ಕಲಾಕೇಂದ್ರದ ಸಂಗೀತ ಶಿಕ್ಷಕಿಯಾದ ಸುಮನಾರಾವ್ ಮತ್ತು ಕುಮಾರಿ ಸುಪ್ರಜಾ ರಾವ್ ಸಂಗೀತ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಭಕ್ತಿಗೀತೆ, ಭಾವಗೀತೆ, ಜನಪದಗೀತೆ, ಚಲನಚಿತ್ರಗೀತೆಗಳ ಪಾಠ ಮಾಡಲಿದ್ದು ಸಮಾರಂಭದ ಉದ್ಘಾಟನೆಯನ್ನು ಎಡಕ್ಕಾನ ಲತಾ ಕೇಶವಭಟ್ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಲಿಂಗಪ್ಪ ಪಟೇಲ್ ಆಗಮಿಸಲಿದ್ದಾರೆ. ಸಮರಂಭದ ಅಧ್ಯಕ್ಷತೆಯನ್ನು ಕೇರಳದ ಗಡಿನಾಡಿನ ಶಾಖೆಯ ಅಧ್ಯಕ್ಷರಾದ ಜಯಲಕ್ಷ್ಮಿ ಕಾರಂತ್ ವಹಿಸಿಕೊಳ್ಳಲಿದ್ದಾರೆ. ಏಪ್ರಿಲ್ 25 ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಕಾರ್ಯಾಗಾರದಲ್ಲಿ ಭಾಗವಹಿಸುವವರು 8281283091, 8281948031 ಈ ಸನೀಹವಾಣಿಗೆ ಸಂಪರ್ಕಿಸಬಹುದು ಎಂದು ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


