ಏ.6; ಕಲಾಕುಂಚದಿಂದ ರಂಗೋಲಿ ಸ್ಪರ್ಧೆಯ ಬಹುಮಾನ ವಿತರಣೆ

Upayuktha
0



ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಯುಗಾದಿ ಹಬ್ಬದ ಪ್ರಯುಕ್ತ “ಮನೆಯಂಗಳದಲ್ಲಿ ಉಚಿತ ರಂಗೋಲಿ ಸ್ಪರ್ಧೆ” ಹಮ್ಮಿಕೊಂಡಿದ್ದು ಏಪ್ರಿಲ್ 6 ರಂದು ಭಾನುವಾರ ಸಂಜೆ 5 ಗಂಟೆಗೆ ಕಲಾಕುಂಚ ಕಚೇರಿಯ ಆವರಣದ ಸಭಾಂಗಣದಲ್ಲಿ ವಿವಿಧ ಬಡಾವಣೆಗಳ ಅವರವರ ಮನೆಯ ಮುಂದೆ ರಂಗೋಲಿ ಹಾಕಿ ಸ್ಪರ್ಧೆಯಲ್ಲಿ ಭಾಗವಹಿಸಿದ ಬಹುಮಾನ ವಿಜೇತರಿಗೆ ಬಹುಮಾನ, ಅಭಿನಂದನಾ ಪತ್ರ ವಿತರಿಸಲಾಗುವುದು ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. 


ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಲಾಕುಂಚ ಎಲೆಬೇತೂರು ಶಾಖೆಯ ಅಧ್ಯಕ್ಷರಾದ ಡಾ|| ನಿರ್ಮಲಾ ವಿಶ್ವನಾಥ್ ಕುಲಕರ್ಣಿ, ಡಿ.ಸಿ.ಎಂ.ಟೌನ್‌ಶಿಪ್  ಶಾಖೆಯ ಅಧ್ಯಕ್ಷರಾದ ಶಾರದಮ್ಮ ಶಿವನಪ್ಪ, ಎಂ.ಸಿ.ಸಿ. ಬ್ಲಾಕ್   ಶಾಖೆಯ ಅಧ್ಯಕ್ಷರಾದ ಪ್ರಭಾ ರವೀಂದ್ರ,  ಸಿದ್ಧವೀರಪ್ಪ ಬಡಾವಣೆ ಶಾಖೆಯ ಅಧ್ಯಕ್ಷರಾದ ಲಲಿತಾ ಕಲ್ಲೇಶ್, ವಿದ್ಯಾನಗರ ಶಾಖೆಯ ಅಧ್ಯಕ್ಷರಾದ ರಾಜಶೇಖರ ಬೆನ್ನೂರು, ಕೆ.ಬಿ.ಬಡಾವಣೆ  ಶಾಖೆಯ ಅಧ್ಯಕ್ಷರಾದ ವಿ.ಕೃಷ್ಣಮೂರ್ತಿ ಆಗಮಿಸಲಿದ್ದಾರೆ.


ಬಹುಮಾನ ವಿಜೇತರು ಸೇರಿದಂತೆ ಕಲಾ ಪ್ರತಿಭಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಮಾರಂಭ ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ವಿನಂತಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top