ಬೆಂಗಳೂರು: ಕರ್ನಾಟಕ ಸರಕಾರವು ಬಜೆಟ್‌ನಲ್ಲಿ ಮುಸ್ಲಿಮರಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿ ಹಿಂದೂಗಳ ಮೇಲೆ ಅನ್ಯಾಯ ಮಾಡಲಾಗಿದೆ. ಇದನ್ನು ರದ್ದುಗೊಳಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕಹಿಂದೂ ರಾಷ್ಟ್ರ ಸಮನ್ವಯ ಸಮಿತಿ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸರಕಾರ ಮುಸಲ್ಮಾನ ಕಾಲೋನಿಗಳಿಗೆ 1000 ಕೋಟಿ, ಮುಸಲ್ಮಾನ ಇಮಾಮರಿಗೆ ಮಾಸಿಕ 6000 ರೂಪಾಯಿ ವೇತನ, ಮುಸಲ್ಮಾನ ಹೆಣ್ಣುಮಕ್ಕಳ ಮದುವೆಗೆ 50 ಸಾವಿರ ರೂಪಾಯಿ, ಮುಸಲ್ಮಾನ ವಿದ್ಯಾರ್ಥಿಗಳ ವಿದೇಶೀ ಶಿಷ್ಯವೇತನಕ್ಕೆ 30 ಲಕ್ಷ ರೂ., ಮುಸಲ್ಮಾನ ಹೆಣ್ಣುಮಕ್ಕಳಿಗೆ ಆತ್ಮ ರಕ್ಷಣೆ ತರಬೇತಿ, ವಕ್ಫ್ ಬೋರ್ಡ ಆಸ್ತಿ ರಕ್ಷಣೆಗೆ 150 ಕೋಟಿ ರೂ. ಅನುದಾನ, ಮುಸಲ್ಮಾನರು ಬಹುಸಂಖ್ಯಾತರಿರುವ ಪ್ರದೇಶದಲ್ಲಿ ಐಟಿಐ ಕಾಲೇಜಿಗೆ ಮಂಜೂರಾತಿ, 100 ಉರ್ದುಶಾಲೆಗಳ ಸ್ಥಾಪನೆ, ಮುಸಲ್ಮಾನ ಯುವಕರ ಸ್ಟಾರ್ಟ್‌ಅಪ್‌ಗೆ ಸಹಾಯಧನ, ಮುಸಲ್ಮಾನ ಮಕ್ಕಳಿಗೆ ವೃತ್ತಿಪರ ತರಬೇತಿ, ಹಜ್ ಭವನಕ್ಕೆ ಅನುದಾನ, ಹೀಗೆ ಸರಕಾರವು ಅಲ್ಪಸಂಖ್ಯಾತರ ಅಭಿವೃದ್ದಿ ನೆಪದಲ್ಲಿ 4500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಸರಕಾರದ ಟೆಂಡರ್‌ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಮಸೂದೆಯನ್ನು ಮಂಡಿಸಲಾಗಿದೆ.
ಭಾರತದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲದಿರುವಾಗಲೂ, ಸರಕಾರವು ಸಂವಿಧಾನಕ್ಕೆ ವಿರುದ್ಧವಾಗಿ ಸಂವಿಧಾನಬಾಹಿರ ಮೀಸಲಾತಿಯನ್ನು ನೀಡಿದೆ. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ೩೪ ಸಾವಿರ ಸೀ ಗ್ರೇಡ್ ದೇವಸ್ಥಾನಗಳ ಅರ್ಚಕರಿಗೆ ಯಾವುದೇ ಸಂಬಳ ಇಲ್ಲ. ಆದರೆ ಇಮಾಮ್‌ರಿಗೆ ೬ ಸಾವಿರ ರೂಪಾಯಿ ಅನುದಾನ ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಸೀ ಗ್ರೇಡ್ ನ ಸಾವಿರಾರು ದೇವಸ್ಥಾನಗಳು ಜೀರ್ಣೋದ್ದಾರ, ಸುಣ್ಣ ಬಣ್ಣ ಇಲ್ಲದೇ ಶಿಥಿಲಾವಸ್ಥೆಗೆ ತಲುಪಿವೆ. ಆದರೆ ಪ್ರಾಚೀನ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಯಾವುದೇ ಅನುದಾನವಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.
ಸರಕಾರವು ಸಾರ್ವಜನಿಕರ ತೆರಿಗೆ ಹಣವನ್ನು ಒಂದೇ ಸಮುದಾಯದ ಅಭಿವೃದ್ಧಿಗೆ ವಿನಿಯೋಗಿಸುವುದು ಭಾರತದ ಸಂವಿಧಾನದ ಕಲಂ 14, 15 ರ ಉಲ್ಲಂಘನೆಯಾಗಿದೆ. ಹಾಗಾಗಿ ಸರಕಾರದ ಈ ವರ್ಷದ ಹಣಕಾಸು ವಿಧೇಯಕಕ್ಕೆ ಅನುಮೋದನೆ ನೀಡಬಾರದು ಎಂದು ಈ ಮನವಿಯ ಮೂಲಕ ಆಗ್ರಹಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ