ಬೆಳ್ತಂಗಡಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರವಾಸಿ ತಾಣದಲ್ಲಿ ಅಮಾಯಕರ ಮೇಲೆ ಉಗ್ರರ ದಾಳಿ ಖಂಡನೀಯ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ.
ಧರ್ಮದ ನೆಲೆಯಲ್ಲಿ ಈ ರೀತಿ ಅಮಾಯಕರ ಮೇಲೆ ದಾಳಿ ಸಲ್ಲದು. ಈ ಬಗ್ಯೆ ನಮಗೆ ಅತೀವ ದುಃಖವಾಗಿದೆ. ಸರಕಾರ ತಕ್ಷಣ ಸೂಕ್ತಕ್ರಮ ತೆಗೆದುಕೊಳ್ಳಬೇಕಾಗಿ ಕೋರುತ್ತೇನೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನಿರೀಕ್ಷಿತವಾಗಿ ಮೃತರಾದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ