ಧರ್ಮಸ್ಥಳ: ಸ್ಥಳೀಯ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ಪಿ.ಯು.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ಭಾನುವಾರ ಧರ್ಮಸ್ಥಳಕ್ಕೆ ಹೋಗಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಹೆಗ್ಗಡೆಯವರು ಅಭಿನಂದಿಸಿ ಅವರಿಗೆ ಉಜ್ವಲ ಭವಿಷ್ಯವನ್ನು ಹಾರೈಸಿದರು.
ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು:
ವಿಜ್ಞಾನ ವಿಭಾಗ:
• ಕುಮಾರಿ ತುಷಾರ ಬಿ.ಎಸ್., (5ನೇ ರ‍್ಯಾಂಕ್) ಪಡೆದ ಅಂಕಗಳು: 595
• ಕುಮಾರಿ ನೀತಿ ಕೆ.ಪಿ. (9ನೇ ರ‍್ಯಾಂಕ್) ಪಡೆದ ಅಂಕಗಳು: 591
ವಾಣಿಜ್ಯ ವಿಭಾಗ:
• ಆರ್ಯದಿನೇಶ್ (7ನೇ ರ‍್ಯಾಂಕ್) ಪಡೆದ ಅಂಕಗಳು: 593
ಕಲಾ ವಿಭಾಗ:
• ಶ್ರೇಯಾ, ಎಚ್.ಎ. (9ನೆ ರ‍್ಯಾಂಕ್) ಪಡೆದ ಅಂಕಗಳು: 589
ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನಿಂದ ಒಟ್ಟು 1099 ವಿದ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ಹಾಜರಾಗಿದ್ದು, 1069 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 97.27ಫಲಿತಾಂಶ ಬಂದಿರುತ್ತದೆ. ಉತ್ತಮ ಫಲಿತಾಂಶಕ್ಕಾಗಿ ಹೆಗ್ಗಡೆಯವರು ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಪ್ರಾಂಶುಪಾಲ ಬಿ. ಪ್ರಮೋದ್ ಕುಮಾರ್, ಉಪನ್ಯಾಸಕರು, ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ