ಏ.14ರಂದು ಡಾ. ಬಿ.ಆರ್. ಅಂಬೇಡ್ಕರ್ 136ನೇ ಜಯಂತಿ ಆಚರಣೆ

Chandrashekhara Kulamarva
0



ಮಂಗಳೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 136ನೇ ಜನ್ಮ ದಿನಾಚರಣೆ ಏಪ್ರಿಲ್ 14ರಂದು ಬೆಳಿಗ್ಗೆ 10.30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಚರಿಸಲಾಗುವುದು.

ಸ್ಪೀಕರ್ ಯು.ಟಿ. ಖಾದರ್ ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ  ಮುಖ್ಯ ಭಾಷಣಕಾರರಾಗಿ ಭಾಗವಹಿಸುವರು.

إرسال تعليق

0 تعليقات
إرسال تعليق (0)
To Top